ಚಿಕ್ಕಮಗಳೂರಿನಲ್ಲಿ ಸುರಿದ ಭಾರಿ ಮಳೆ | ನೂರು ಕೋಟಿ ರೂಪಾಯಿಗೂ ಅಧಿಕ ಮಳೆ ಹಾನಿ

July 30, 2024
12:42 PM

ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟಿದ್ದ ಹಿನ್ನೆಲೆ ರಾಜ್ಯಾದ್ಯಂತ ಬರಗಾಲ(Drought) ಆವರಿಸಿತ್ತು. ಆದರೆ ಈ ಬಾರಿ ಮುಂಗಾರು ನಿರೀಕ್ಷೆಗಿಂತ ಹೆಚ್ಚಾಗಿ ಈಗಾಗಲೇ ಮಲೆನಾಡು(Malenadu), ಕರಾವಳಿಯಲ್ಲಿ(Coastal) ಸುರಿಯುತ್ತಿದೆ. ಮಲೆನಾಡಿನಲ್ಲಿ ವಾಡಿಕೆಯಂತೆ ಜನವರಿಯಿಂದ ಜೂನ್​ವರೆಗೆ 817 ಮಿ.ಮೀ ಮಳೆಯಾಗಬೇಕು.‌ ಆದರೆ 1,096 ಮಿ.ಮೀ ಮಳೆ ಸುರಿದಿದ್ದು, ಇದು ಶೇ 76 ರಷ್ಟು ಹೆಚ್ಚು. ಕಳೆದ ಒಂದೇ ವಾರದಲ್ಲಿ 120 ಮಿ.ಮೀ ಮಳೆ ಆಗಬೇಕಿದ್ದು, 320 ಮಿ.ಮೀ ಮಳೆ ಬಿದ್ದಿದೆ(Excess Rainfall) ಎಂದು ಚಿಕ್ಕಮಗಳೂರಿನ(Chikkamagaluru) ಜಿಲ್ಲಾಧಿಕಾರಿ ಮೀನಾ ನಾಗಾರಾಜ್ ಮಾಹಿತಿ ನೀಡಿದರು.

Advertisement
Advertisement
Advertisement

ಈ ವರ್ಷದ ಮಹಾಮಳೆಗೆ 193 ಮನೆಗಳು ಧರಾಶಾಹಿಯಾಗಿವೆ. 77 ಮನೆಗಳಿಗೆ ಜಿಲ್ಲಾಡಳಿತ ಪರಿಹಾರ ನೀಡಿದೆ. 44 ಮನೆಗಳಿಗೆ ದಾಖಲೆ ಇಲ್ಲ ಎಂದು ಸರ್ಕಾರಕ್ಕೆ ವರದಿ ನೀಡಲಾಗಿದೆ. 1,800 ವಿದ್ಯುತ್​ ಕಂಬಗಳು, 48 ಸೇತುವೆಗಳು ಹಾನಿಗೀಡಾಗಿವೆ. 90 ಎಕರೆ ತೋಟದ ಬೆಳೆ ನಾಶವಾಗಿದೆ. 10 ಕಿ.ಮೀ ರಸ್ತೆ ಹಾನಿಗೊಂಡಿದೆ. ಮುಳ್ಳಯ್ಯನಗಿರಿಯಲ್ಲಿ ಹಲವೆಡೆ ಭೂಕುಸಿತ ಉಂಟಾಗಿದ್ದು ಒಂದು ವಾರ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು. ಲೋಕೋಪಯೋಗಿ ಇಲಾಖೆಯ ಮನವಿಯಂತೆ ಇನ್ನೊಂದು ವಾರ ಜಿಲ್ಲಾಡಳಿತ ನಿರ್ಬಂಧ ಹೇರಲಿದೆ ಎಂದು ಹೇಳಿದರು.

Advertisement
  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೋಲಾರದಲ್ಲಿ ಅತೀ ಹೆಚ್ಚು ನಕಲಿ ವೈದ್ಯರು…! | ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ
November 21, 2024
7:36 PM
by: The Rural Mirror ಸುದ್ದಿಜಾಲ
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮನವಿ
November 21, 2024
7:32 PM
by: The Rural Mirror ಸುದ್ದಿಜಾಲ
ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ದೆಹಲಿಯಲ್ಲಿ ಲಭ್ಯ | 2.5 ಲಕ್ಷ ಲೀಟರ್ ಹಾಲು ದೆಹಲಿಗೆ ಪೂರೈಸಲು ತೀರ್ಮಾನ |
November 21, 2024
7:25 PM
by: ದ ರೂರಲ್ ಮಿರರ್.ಕಾಂ
ಹುಣಸೆ ಹಣ್ಣು ಸಂರಕ್ಷಣೆ, ಮಾರಾಟದ ತರಬೇತಿ ಕಾರ್ಯಾಗಾರ
November 21, 2024
7:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror