07.10.2024 ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 12ರ ತನಕ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಕ್ಟೊಬರ್ 15 ರ ತನಕ ಉತ್ತರ ಕನ್ನಡ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಈಗಿನಂತೆ ಅಕ್ಟೊಬರ್ 15ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಹಾವೇರಿ, ಧಾರವಾಡ ಹಾಗೂ ಗದಗ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ ಇದ್ದು, ಬೆಳಗಾವಿ, ದಾವಣಗೆರೆ, ಬಳ್ಳಾರಿ, ಬಾಗಲಕೋಟೆ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರಿನ ಒಂದೆರಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ ಇದ್ದು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 15ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಅಕ್ಟೊಬರ್ 10ರ ನಂತರದ ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಸ್ವಷ್ಠತೆ ಇನ್ನಷ್ಟೇ ದೊರೆಯಬೇಕಿದೆ.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…