ಬಾಹ್ಯಕಾಶದಲ್ಲಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹೆಸರುಕಾಳು ಹಾಗೂ ಮೆಂತ್ಯ ಕಾಳುಗಳ ಮೊಳಕೆಯೊಡೆಯುವ ಪ್ರಯೋಗಗಳನ್ನು ನಡೆಸಲಾಗುತ್ತಿದೆ ಎಂದು ನಾಸಾ ತಿಳಿಸಿದೆ.
ಆಕ್ಸಿಯಮ್ ಸ್ಪೇಸ್ ಮಿಷನ್ 4 ರ ಭಾಗವಾಗಿ ಪ್ರಸ್ತುತ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ, ಕಕ್ಷೆಯ ಪ್ರಯೋಗಾಲಯದಲ್ಲಿ ಹೆಸರುಕಾಳು ಮತ್ತು ಮೆಂತ್ಯ ಬೀಜಗಳ ಪ್ರಯೋಗ ನಡೆಸುತ್ತಿದ್ದಾರೆ. ಇಸ್ರೋ, ಜೈವಿಕ ತಂತ್ರಜ್ಞಾನ ಇಲಾಖೆ ಮತ್ತು ನಾಸಾ ನಡುವಿನ ಸಹಯೋಗದಡಿಯಲ್ಲಿ ಅಭಿವೃದ್ಧಿ ಪಡಿಸಲಾದ ಹಲವಾರು ಪ್ರಯೋಗಗಳನ್ನು ಕೈಗೊಳ್ಳುತ್ತಿದ್ದಾರೆ. ಬಾಹ್ಯಾಕಾಶದಲ್ಲಿ ಮೊಳಕೆಯೊಡೆಯುವ ಸಲಾಡ್ ಸೀಡ್ಸ್ ಎಂಬ ಪ್ರಯೋಗವು ಸಸ್ಯ ಆಧಾರಿತ ಆಹಾರ ಉತ್ಪಾದನಾ ವ್ಯವಸ್ಥೆಗಳು ಮಾನವ ಬಾಹ್ಯಕಾಶ ಪರಿಶೋಧನೆಯ ದೀರ್ಘಕಾಲೀನ ಗುರಿಗಳನ್ನು ಸಾಧಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel