ಮಂಗಳೂರು-ಬೆಂಗಳೂರು ಸಂಪರ್ಕಿಸಲು ಎಕ್ಸ್‌ಪ್ರೆಸ್‌ವೇ | 2028 ರಲ್ಲಿ ಪ್ರಾರಂಭವಾಗುವ ನಿರೀಕ್ಷೆ |

November 12, 2024
10:26 PM

ಮಂಗಳೂರು-ಬೆಂಗಳೂರು ಸಂಪರ್ಕಿಸಲು ಎಕ್ಸ್‌ಪ್ರೆಸ್‌ವೇ (ಹೈ-ಸ್ಪೀಡ್ ಕಾರಿಡಾರ್) ನಿರ್ಮಿಸಲು ಯೋಜನೆ ರೂಪಿಸಲಾಗಿದೆ.  ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಈ ಬಗ್ಗೆ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ತಯಾರಿಸಲು ಸಲಹಾ ಸಂಸ್ಥೆಯನ್ನು ಆಯ್ಕೆ ಮಾಡಲು ಬಿಡ್‌ಗಳನ್ನು ಆಹ್ವಾನಿಸಿತ್ತು. ಇದೀಗ 9 ಸಂಸ್ಥೆಗಳು ಬಿಡ್‌ ಸಲ್ಲಿಸಿದೆ. ಡಿಪಿಆರ್ ತಯಾರಿಸಲು 540 ದಿನಗಳನ್ನು ನೀಡಲಾಗುತ್ತಿದ್ದು, ರಸ್ತೆ ನಿರ್ಮಾಣವು 2028 ರಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ.

ಮಂಗಳೂರು-ಬೆಂಗಳೂರು ರಸ್ತೆಯು 335 ಕಿ.ಮೀ ಇರಬಹುದು, ನಾಲ್ಕು ಅಥವಾ ಆರು ಲೇನ್‌ಗಳನ್ನು ಹೊಂದಿರಬಹುದು. ಹಾಸನದ ಮೂಲಕ ರಸ್ತೆ ಹಾದುಹೋಗುತ್ತದೆ. ಪಶ್ಚಿಮ ಘಟ್ಟಗಳ ಹಲವು ಕಡೆ ಬೈಪಾಸ್‌ ರಸ್ತೆ ಹೊಂದಿರುತ್ತದೆ. ಎಕ್ಸ್‌ಪ್ರೆಸ್‌ವೇ ಜಾರಿಯಾದರೆ,  ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಯಾಣದ ಸಮಯವು ಇಳಿಕೆಯಾಗಲಿದೆ.

ಡಿಪಿಆರ್ ಸಿದ್ಧಪಡಿಸಿದ ಬಳಿಕವಷ್ಟೇ ಮುಂದಿನ ಎಲ್ಲಾ ಅಂಶಗಳು ತಿಳಿಯಲಿದೆ. ಈ ಕಾರಿಡಾರ್‌ ಯೋಜನೆಗೆ ಶಿರಾಡಿ ಘಾಟ್ ಪ್ರದೇಶವು ಮಾತ್ರಾ ಸಮಸ್ಯೆಯಾಗಲಿದೆ.ಅಲ್ಲಿ ಫ್ಲೈಓವರ್‌ಗಳು ಮತ್ತು ಕೆಲವು ಕಡೆ ಸುರಂಗಗಳನ್ನು ನಿರ್ಮಿಸುವ ಮೂಲಕ ಇನ್ನೂ ಎರಡು ಲೇನ್‌ಗಳನ್ನು ಸೇರಿಸಲು ಎನ್‌ಎಚ್‌ಎಐ ಯೋಜಿಸಿದೆ. ಯಾವುದೇ ಕಾರಣಕ್ಕೂ ಪರಿಸರಕ್ಕೆ ಹೆಚ್ಚಿನ ಹಾನಿಯಾಗದಂತೆ ರಸ್ತೆ ಕಾಮಗಾರಿ ನಡೆಸುವ ಬಗ್ಗೆಯೂ ಚಿಂತನೆ ನಡೆದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror