ಕೇಂದ್ರ ಸರ್ಕಾರ ರಾಜ್ಯದ ಶೇಂಗಾ ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದೆ. ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ ಅವಧಿ ವಿಸ್ತರಿಸಿ ಆದೇಶ ನೀಡಿದೆ.ರಾಜ್ಯದಲ್ಲಿ ಈ ಬಾರಿ ಅಧಿಕ ಪ್ರಮಾಣದಲ್ಲಿ ಶೇಂಗಾ ಬೆಳೆದ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಘೋಷಿಸಿ ರೈತರಿಗೆ ನೆರವಾಗಿದ್ದ ಕೇಂದ್ರ ಸರ್ಕಾರ, ಈಗ ಮತ್ತೆ ಖರೀದಿ ಅವಧಿ ವಿಸ್ತರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ರೈತರ ಹಿತದೃಷ್ಟಿಯಿಂದ ಬೆಂಬಲ ಬೆಲೆ ಖರೀದಿಯ ಕಾಲಮಿತಿ ಹೆಚ್ಚಿಸುವಂತೆ ಕೇಂದ್ರ ಕೃಷಿ ಸಚಿವರಲ್ಲಿ ಪ್ರಲ್ಹಾದ್ ಜೋಶಿ ಮನವಿ ಮಾಡಿದ್ದರು. ಸಚಿವರ ಮನವಿ ಮೇರೆಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ ಪ್ರಕ್ರಿಯೆಯನ್ನು ಮಾ.15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.ಕೇಂದ್ರ ಸರ್ಕಾರ ರಾಜ್ಯದಿಂದ ಈ ಬಾರಿ ಒಟ್ಟು 57 703 ಮೆಟ್ರಿಕ್ ಟನ್ ಶೇಂಗಾವನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel