ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು, ಪೂರ್ವಭಾವಿ ತಯಾರಿ ಮಾಡಿಕೊಂಡು, ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಖಂಡಿತ ಯಶಸ್ಸು ಲಭಿಸುತ್ತದೆ ಎಂದು ಶಿಕ್ಷಣ ತಜ್ಞ ಗುರುರಾಜ ಕರ್ಜಗಿ ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಉತ್ತೇಜನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರೀಕ್ಷೆಗಳ ಭಯದಿಂದಾಗಿ ಅನೇಕ ವಿದ್ಯಾರ್ಥಿಗಳು, ಓದಿದ್ದನ್ನು ಮರೆತು ಅನುತ್ತೀರ್ಣರಾಗುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ಪರೀಕ್ಷೆಗಾಗಿ ನಿಯಮಿತವಾಗಿ ಓದುವ ಅಭ್ಯಾಸ ಕ್ರಮವನ್ನು ರೂಢಿಸಿಕೊಂಡು, ಏಕಾಗ್ರತೆಯಿಂದ ಮನನ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel