Advertisement
ಸುದ್ದಿಗಳು

ಗ್ಯಾರಂಟಿ ಫಲಾನುಭವಿಗಳಿಗೆ ವಿಳಂಬವಿಲ್ಲದೆ ಸೌಲಭ್ಯ ತಲುಪಿಸಿ

Share

ರಾಜ್ಯ ಸರ್ಕಾರದ ಪಂಚಗ್ಯಾರಂಟಿ ಯೋಜನೆಗಳ ಅನುಷ್ಟಾನವನ್ನು ಸಮರ್ಪಕವಾಗಿ ಮಾಡಬೇಕು. ಅರ್ಹ ಫಲಾನುಭವಿಗಳಿಗೆ  ಯೋಜನೆಗಳ ಸೌಲಭ್ಯ ತಲುಪಿಸಲು ವಿಳಂಬ ಮಾಡಬಾರದು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕು ಎಂದು  ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ  ಗ್ಯಾರಂಟಿ  ಯೋಜನೆಗಳ  ಅನುಷ್ಟಾನ ಸಮಿತಿ ಅಧ್ಯಕ್ಷ   ಭರತ್ ಮುಂಡೋಡಿ ಹೇಳಿದ್ದಾರೆ.

ಅವರು ಬುಧವಾರ  ದ.ಕ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ  ಗ್ಯಾರಂಟಿ  ಯೋಜನೆಗಳ  ಅನುಷ್ಟಾನದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಫಲಾನುಭವಿಗಳಿಗೆ ಸೌಲಭ್ಯಗಳನ್ನು ನಿಗದಿತ ಸಮಯದಲ್ಲಿಯೇ ತಲುಪಿಸಬೇಕು. ಯೋಜನೆಗಳ  ಸದುಪಯೋಗವನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ಮುಟ್ಟಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು  ಸೂಚಿಸಿದರು. ತಾಲೂಕು ವ್ಯಾಪ್ತಿಗೆ ಒಳಪಡುವ ಜನರಿಗೆ ಯೋಜನೆಗಳ ಸೌಲಭ್ಯ  ದೊರಕುತ್ತಿದೆಯೇ ಎಂಬ ಮಾಹಿತಿ ಪಡೆದು, ಸೌಲಭ್ಯಗಳು ಸಿಗದೇ  ಇದ್ದಲ್ಲಿ  ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ  ತರಬೇಕು ಎಂದು ಅವರು ಸೂಚಿಸಿದರು.

ಗೃಹಲಕ್ಷ್ಮಿ ಯೋಜನೆಯಡಿ ಒಟ್ಟು ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳ ಪೈಕಿ ಆಗಸ್ಟ್  16 ರಿಂದ  ಸೆಪ್ಟೆಂಬರ್ 8  ರವರೆಗೆ ಒಟ್ಟು 184 ಫಲಾನುಭವಿಗಳು ನೋಂದಾಯಿಸಿಕೊಂಡಿದ್ದು, ಒಟ್ಟಾರೆಯಾಗಿ 3,79,452 ಫಲಾನುಭವಿಗಳು ಯೋಜನೆಗೆ ನೋಂದಾಯಿಸಿಕೊಂಡಿರುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು  ಸಭೆಗೆ ಮಾಹಿತಿ ನೀಡಿದರು.

ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ “ಅನ್ನ ಭಾಗ್ಯ” ಯೋಜನೆಯ ಬ್ಯಾನರ್‍ಗಳನ್ನು ಸರಬರಾಜು ಮಾಡಬೇಕು. ಎಲ್ಲಾ ಕಡೆಗಳಲ್ಲಿ ಬ್ಯಾನರ್‍ಗಳನ್ನು ಅಳವಡಿಸಿರುವುದಿಲ್ಲ ಎಂದು ಮುಲ್ಕಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದಾಗ, ಸರ್ಕಾರದಿಂದ ಬ್ಯಾನರ್‍ಗಳನ್ನು ನೀಡಲಾದ ಬಗ್ಗೆ ಪರಿಶೀಲನೆ ನಡೆಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕರಿಗೆ  ಸಭಾಧ್ಯಕ್ಷರು ಸೂಚಿಸಿದರು.

ಕೌಶಲ್ಯ ತರಬೇತಿ  ಕಾರ್ಯಕ್ರಮಗಳನ್ನು ಮಾಡುವುದರಿಂದ   ಯುವಜನತೆಯ ಮುಂದಿನ ಭವಿಷ್ಯಕ್ಕೆ ಅನುಕೂಲವಾಗುತ್ತದೆ.  ಹಾಗೆಯೇ  ಉದ್ಯೋಗ ಇಲಾಖೆ ಹಾಗೂ ಜಿಲ್ಲಾ ಹಾಗೂ  ಗ್ಯಾರಂಟಿ  ಯೋಜನೆಗಳ  ಅನುಷ್ಟಾನ ಸಮಿತಿ ವತಿಯಿಂದ ಜಿಲ್ಲೆಯಲ್ಲಿ  ಉದ್ಯೋಗ ಮೇಳ  ಮಾಡಲು  ಸೂಚಿಸಿದರು.

Advertisement

ಸಭೆಯಲ್ಲಿ  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ನರ್ವಾಡೆ ವಿನಾಯಕ ಕಾರ್ಭಾರಿ,   ಜಿಲ್ಲಾ ಪಂಚಾಯತ್ ಮುಖ್ಯ  ಯೋಜನಾಧಿಕಾರಿ ಸಂಧ್ಯಾ  ಕೆ.ಎಸ್,  ಜಿಲ್ಲಾ ಹಾಗೂ ತಾಲೂಕು ಮಟ್ಟದ  ಗ್ಯಾರಂಟಿ  ಯೋಜನೆಗಳ  ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…

6 hours ago

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…

6 hours ago

ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ

ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…

7 hours ago

2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು

ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…

7 hours ago

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…

7 hours ago

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

24 hours ago