ಪೆಟ್ರೋಲಿಯಂ ಸಂಸ್ಥೆಗಳ ಮಾಲೀಕರಿಗೆ ಸುಳ್ಳು ಕರೆ | ಲೈಸೆನ್ಸ್ ಹೆಸರಿನಲ್ಲಿ ಹಣ ಕೇಳುವ ವಂಚನೆ – ಎಚ್ಚರಿಕೆ

January 16, 2026
9:31 PM
ಪೆಟ್ರೋಲಿಯಂ ಸಂಸ್ಥೆಗಳ ಲೈಸೆನ್ಸ್ ನವೀಕರಣದ ಹೆಸರಿನಲ್ಲಿ ತಾನು ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡು ಹಣ ಕೇಳುವ ಸುಳ್ಳು ಕರೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರದಿಯಾಗಿವೆ. ಇಂತಹ ಕರೆಗಳಿಗೆ ಪ್ರತಿಕ್ರಿಯೆ ನೀಡಬಾರದು ಹಾಗೂ ಹಣ ಪಾವತಿಸಬಾರದು ಎಂದು ಕಾರ್ಮಿಕ ಇಲಾಖೆ ಎಚ್ಚರಿಕೆ ನೀಡಿದೆ.

ಪೆಟ್ರೋಲಿಯಂ ಸಂಸ್ಥೆಗಳ ನೋಂದಣಿ ಅಥವಾ ಲೈಸೆನ್ಸ್ ನವೀಕರಣದ ಹೆಸರಿನಲ್ಲಿ ಸುಳ್ಳು ಕರೆಗಳು ಬರುತ್ತಿರುವ ಕುರಿತು ಕಾರ್ಮಿಕ ಇಲಾಖೆ ಎಚ್ಚರಿಕೆ ನೀಡಿದೆ.

ಶಿವರಾಜ್ ಎಂಬ ಹೆಸರಿನ ವ್ಯಕ್ತಿ (ಮೊಬೈಲ್ ಸಂಖ್ಯೆ: 8150816922) ತಾನು ಕಾರ್ಮಿಕ ಇಲಾಖೆಯ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡು, ಲೈಸೆನ್ಸ್ ನವೀಕರಣಕ್ಕಾಗಿ ರೂ.11,700ನ್ನು ಫೋನ್‌ಪೇ ಮೂಲಕ ಪಾವತಿಸಲು ಒತ್ತಾಯಿಸುತ್ತಿರುವುದು ಗಮನಕ್ಕೆ ಬಂದಿದೆ. ಹಣ ಪಾವತಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆದರಿಕೆ ಹಾಕುತ್ತಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗಡಿ–ವಾಣಿಜ್ಯ ಸಂಸ್ಥೆಗಳು ಹಾಗೂ ವಿಶೇಷವಾಗಿ ಪೆಟ್ರೋಲಿಯಂ ಸಂಸ್ಥೆಗಳ ಮಾಲೀಕರು ಇಂತಹ ಕರೆಗಳಿಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಬಾರದು ಹಾಗೂ ಹಣ ಪಾವತಿಸಬಾರದು ಎಂದು ಕಾರ್ಮಿಕ ಇಲಾಖೆ ಮನವಿ ಮಾಡಿದೆ.

ಇಂತಹ ಸುಳ್ಳು ಕರೆಗಳು ಬಂದಲ್ಲಿ, ಸಂಬಂಧಿಸಿದ ದಾಖಲೆಗಳೊಂದಿಗೆ ತಕ್ಷಣವೇ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡುವಂತೆ ಸೂಚಿಸಲಾಗಿದೆ. ಜೊತೆಗೆ, ಸಂಸ್ಥೆಗಳ ವಾಟ್ಸಪ್ ಗ್ರೂಪ್‌ಗಳ ಮೂಲಕ ಈ ಎಚ್ಚರಿಕೆ ಮಾಹಿತಿಯನ್ನು ಎಲ್ಲರಿಗೂ ಹಂಚಿಕೊಳ್ಳುವಂತೆ ಮನವಿ ಮಾಡಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಇಂತಹ ಸುಳ್ಳು ಕರೆಗಳಿಂದ ಉಂಟಾಗುವ ಯಾವುದೇ ಆರ್ಥಿಕ ನಷ್ಟಕ್ಕೆ ಇಲಾಖೆಯನ್ನು ಹೊಣೆಗಾರನಾಗಿಸಲು ಸಾಧ್ಯವಿಲ್ಲ ಎಂದು ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror