ಪೆಟ್ರೋಲಿಯಂ ಸಂಸ್ಥೆಗಳ ನೋಂದಣಿ ಅಥವಾ ಲೈಸೆನ್ಸ್ ನವೀಕರಣದ ಹೆಸರಿನಲ್ಲಿ ಸುಳ್ಳು ಕರೆಗಳು ಬರುತ್ತಿರುವ ಕುರಿತು ಕಾರ್ಮಿಕ ಇಲಾಖೆ ಎಚ್ಚರಿಕೆ ನೀಡಿದೆ.
ಶಿವರಾಜ್ ಎಂಬ ಹೆಸರಿನ ವ್ಯಕ್ತಿ (ಮೊಬೈಲ್ ಸಂಖ್ಯೆ: 8150816922) ತಾನು ಕಾರ್ಮಿಕ ಇಲಾಖೆಯ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡು, ಲೈಸೆನ್ಸ್ ನವೀಕರಣಕ್ಕಾಗಿ ರೂ.11,700ನ್ನು ಫೋನ್‌ಪೇ ಮೂಲಕ ಪಾವತಿಸಲು ಒತ್ತಾಯಿಸುತ್ತಿರುವುದು ಗಮನಕ್ಕೆ ಬಂದಿದೆ. ಹಣ ಪಾವತಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆದರಿಕೆ ಹಾಕುತ್ತಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗಡಿ–ವಾಣಿಜ್ಯ ಸಂಸ್ಥೆಗಳು ಹಾಗೂ ವಿಶೇಷವಾಗಿ ಪೆಟ್ರೋಲಿಯಂ ಸಂಸ್ಥೆಗಳ ಮಾಲೀಕರು ಇಂತಹ ಕರೆಗಳಿಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಬಾರದು ಹಾಗೂ ಹಣ ಪಾವತಿಸಬಾರದು ಎಂದು ಕಾರ್ಮಿಕ ಇಲಾಖೆ ಮನವಿ ಮಾಡಿದೆ.
ಇಂತಹ ಸುಳ್ಳು ಕರೆಗಳು ಬಂದಲ್ಲಿ, ಸಂಬಂಧಿಸಿದ ದಾಖಲೆಗಳೊಂದಿಗೆ ತಕ್ಷಣವೇ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡುವಂತೆ ಸೂಚಿಸಲಾಗಿದೆ. ಜೊತೆಗೆ, ಸಂಸ್ಥೆಗಳ ವಾಟ್ಸಪ್ ಗ್ರೂಪ್‌ಗಳ ಮೂಲಕ ಈ ಎಚ್ಚರಿಕೆ ಮಾಹಿತಿಯನ್ನು ಎಲ್ಲರಿಗೂ ಹಂಚಿಕೊಳ್ಳುವಂತೆ ಮನವಿ ಮಾಡಲಾಗಿದೆ.
ಇಂತಹ ಸುಳ್ಳು ಕರೆಗಳಿಂದ ಉಂಟಾಗುವ ಯಾವುದೇ ಆರ್ಥಿಕ ನಷ್ಟಕ್ಕೆ ಇಲಾಖೆಯನ್ನು ಹೊಣೆಗಾರನಾಗಿಸಲು ಸಾಧ್ಯವಿಲ್ಲ ಎಂದು ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಮಂಗಳೂರಿನ ಸೇನಾ ನೇಮಕಾತಿ ಕಚೇರಿಯಿಂದ ಜನವರಿ 30ರಿಂದ ಫೆಬ್ರವರಿ 10ರವರೆಗೆ ಮೂಡಬಿದ್ರಿಯ ಸ್ವರಾಜ್…
ಸಂಸದ ಬ್ರಿಜೇಶ್ ಚೌಟ ವಿಶೇಷ ಮುತುವರ್ಜಿಯಿಂದ ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್…
ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಒಂದಾಗಿರುವ ಕೋಲಾರ ಜಿಲ್ಲೆಯಲ್ಲಿ, ಕೃಷಿ ಚಟುವಟಿಕೆಗಳ ಜತೆಗೆ ಕುರಿ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಋತುವಿನ ಬಿಳಿ ಜೋಳವನ್ನು ರೈತರಿಂದ ನೇರವಾಗಿ…
2025ರ ಜಾಗತಿಕ ಹೂಡಿಕೆದಾರರ ಸಮಾವೇಶದ ಒಡಂಬಡಿಕೆಗಳಲ್ಲಿ ಶೇಕಡಾ 46ರಷ್ಟು ನೈಜ ಹೂಡಿಕೆಯಾಗಿ ಸಾಕಾರ.…
ಕರ್ನಾಟಕದ ಜಿಐ ಕೃಷಿ ಉತ್ಪನ್ನಗಳು ಮೊದಲ ಬಾರಿಗೆ ಮಾಲ್ಡೀವ್ಸ್‌ಗೆ ರಫ್ತು; ಭಾರತದ ಕೃಷಿ…