Advertisement
MIRROR FOCUS

ನಕಲಿ ಬೀಜಗಳ ಮಾರಾಟ ತಡೆಗೆ ಕ್ರಮ – ಬಜೆಟ್ ಅಧಿವೇಶನದಲ್ಲಿ ಬೀಜ ಕಾಯ್ದೆ–2026 ಮಂಡನೆ

Share

ನಕಲಿ ಹಾಗೂ ಕಳಪೆ ಬೀಜಗಳ ಮಾರಾಟವನ್ನು ಸಂಪೂರ್ಣವಾಗಿ ತಡೆಯುವ ಉದ್ದೇಶದಿಂದ ಹೊಸ ಕಾಯ್ದೆಯನ್ನು ರೂಪಿಸಲಾಗಿದ್ದು, ನೂತನ ಬೀಜ ಕಾಯ್ದೆ–2026ನ್ನು ಬರುವ ಬಜೆಟ್ ಅಧಿವೇಶನದಲ್ಲಿ ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ಸರ್ಕಾರ ನಡೆಸಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’ದ ವೇಳೆ ಹಲವು ರೈತರು ಕಳಪೆ ಮತ್ತು ನಕಲಿ ಬೀಜಗಳ ಮಾರಾಟ ಕುರಿತು ದೂರುಗಳನ್ನು ಸಲ್ಲಿಸಿದ್ದರು. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ನಕಲಿ ಬೀಜಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಹೊಸ ಕಾಯ್ದೆಯನ್ನು ರೂಪಿಸಲಾಗಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ನೂತನ ಬೀಜ ಕಾಯ್ದೆಯು ರೈತರ ಹಿತ ರಕ್ಷಣೆಯೇ ಮುಖ್ಯ ಉದ್ದೇಶವಾಗಿದ್ದು, ಕಳಪೆ ಹಾಗೂ ನಕಲಿ ಬೀಜಗಳನ್ನು ಮಾರಾಟ ಮಾಡುವ ಯಾವುದೇ ಸಂಸ್ಥೆ ಅಥವಾ ವ್ಯಕ್ತಿಗಳ ವಿರುದ್ಧ ಕಠಿಣ ದಂಡ ಮತ್ತು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಸ್ತುತ 1966ರ ಬೀಜಗಳ ಕಾಯ್ದೆಯಡಿ ಗರಿಷ್ಠ 500 ರೂಪಾಯಿ ದಂಡ ಮಾತ್ರ ವಿಧಿಸಬಹುದಾಗಿತ್ತು. ಆದರೆ ಹೊಸ ಕಾಯ್ದೆಯಡಿ 30 ಲಕ್ಷ ರೂಪಾಯಿವರೆಗೆ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಗುರಿಪಡಿಸುವ ಅವಕಾಶ ಇರಲಿದೆ ಎಂದು ಸಚಿವರು ವಿವರಿಸಿದರು.

ಹೊಸ ಕಾಯ್ದೆಯನ್ವಯ ಬೀಜ ಉತ್ಪಾದಿಸುವ ಎಲ್ಲಾ ಸಂಸ್ಥೆಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕಾಗಿದ್ದು, ಇದರಿಂದ ಬೀಜಗಳ ಮೂಲವನ್ನು ಸುಲಭವಾಗಿ ಪತ್ತೆಹಚ್ಚಲು ಸಾಧ್ಯವಾಗಲಿದೆ. ಇದು ನಕಲಿ ಬೀಜ ಜಾಲವನ್ನು ಭೇದಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಇದೇ ವೇಳೆ, ರೈತರ ನಡುವೆ ಪರಂಪರಗತವಾಗಿ ನಡೆದುಕೊಂಡು ಬಂದಿರುವ ಬೀಜಗಳ ಬಳಕೆ ಮತ್ತು ವಿನಿಮಯ ಪದ್ಧತಿಗೆ ನೂತನ ಕಾಯ್ದೆಯಿಂದ ಯಾವುದೇ ತೊಂದರೆ ಉಂಟಾಗುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

4 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago