ಸದಾ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನದ ದರ #goldrate ಕೆಲ ದಿನಗಳಿಂದ ನಿಧಾನಕ್ಕೆ ಸ್ವಲ್ಪವೇ ಸ್ವಲ್ಪ ಇಳಿಯುತ್ತಿದೆ. ಇದು ಗ್ರಾಹಕರಲ್ಲಿ ಕೊಂಚ ಖುಷಿ ತಂದಿದೆ. ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 59,020 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್ಗೆ 71.50 ರು ಆಗಿದೆ.
Advertisement
ಚಿನ್ನ ಮತ್ತು ಬೆಳ್ಳಿ ಬೆಲೆ #Gold #Silver Prices ಮತ್ತೆ ಭರ್ಜರಿಯಾಗಿ ಇಳಿದಿದೆ. ಅಮೆರಿಕ, ಯುಎಇ, ಸಿಂಗಾಪುರ ಇತ್ಯಾದಿ ಬಹುತೇಕ ವಿದೇಶಗಳಲ್ಲಿ ಚಿನ್ನದ ಬೆಲೆ 50,000 ರೂ ಒಳಗಿದೆ. ಭಾರತದಲ್ಲೂ ಚಿನ್ನದ ಬೆಲೆ ಗಮನಾರ್ಹವಾಗಿ ಇಳಿದಿದೆ. ಬೆಳ್ಳಿ ಬೆಲೆಯೂ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 59,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 54,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,075 ರುಪಾಯಿಯಲ್ಲಿ ಇದೆ.
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement