ರಾತ್ರಿ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ಮೂವರು ಹೊಟ್ಟೆ ನೋವಿನಿಂದ ಸಾವನಪ್ಪಿದ ಘಟನೆ ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕೆ. ತಿಮ್ಮಾಪುರದಲ್ಲಿ ನಡೆದಿದೆ. ಅಸ್ವಸ್ಥಗೊಂಡ 6 ಮಂದಿಯ ಪೈಕಿ ಮೂವರಿಗೆ ಚಿಕಿತ್ಸೆ ಮುಂದುವರೆದಿದೆ.
ಬೆಂಗಳೂರಿನಲ್ಲಿ ವಾಸವಿದ್ದ ರಮೇಶ್ ಕುಟುಂಬ 4 ದಿನಗಳ ಹಿಂದೆ ರಾಯಚೂರಿನ ಸ್ವಗ್ರಾಮಕ್ಕೆ ಮರಳಿತ್ತು. ಸೋಮವಾರ ಮನೆಯ ಯಜಮಾನ ಹೊಲದಲ್ಲಿ ತೊಗರಿಬೆಳೆಗೆ ಕೀಟನಾಶಕ ಸಿಂಪಡಿಸಿದ್ದರು. ರೈತ ಕುಟುಂಬದ ಇವರು ಹತ್ತಿ ಹಾಗೂ ತೊಗರಿ ಬೆಳೆಯುತ್ತಾರೆ. ತೋಟದ ಅಂಚಿನಲ್ಲಿ ತರಕಾರಿ ಕೃಷಿಯನ್ನೂ ಮಾಡುತ್ತಿದ್ದರು. ಸೋಮವಾರ ರಾತ್ರಿ ತಮ್ಮದೇ ಹೊಲದಲ್ಲಿ ಬೆಳೆದಿರುವ ತರಕಾರಿಯನ್ನು ತಂದು ಪಲ್ಯ, ಸಾರು ಮಾಡಿದ್ದರು. ಊಟದ ಬಳಿಕ ರಾತ್ರಿ ಕುಟುಂಬ ಮಲಗಿತ್ತು. ತಡ ರಾತ್ರಿ ಕುಟುಂಬದ ಎಲ್ಲಾ ಸದಸ್ಯರು ಹೊಟ್ಟೆನೋವಿನಿಂದ ಬಳಲಿದ್ದರು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ ರಮೇಶ್(35), ಪುತ್ರಿ ನಾಗಮ್ಮ(8) , ದೀಪಾ(6) ಮೃತಪಟ್ಟಿದ್ದಾರೆ. ಉಳಿದವರಿಗೆ ಚಿಕಿತ್ಸೆ ಮುಂದುವರಿಯುತ್ತಿದೆ.
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…
ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…
ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…
ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…