ಸಿದ್ದರಾಮಯ್ಯ ಸಿಎಂ ಘೋಷಣೆ ಬೆನ್ನಲ್ಲೆ ನಿವಾಸದ ಬಳಿ ಫ್ಲೆಕ್ಸ್ ಗಳು ರಾರಾಜಿಸುತ್ತಿವೆ. 2 ಬಾರಿಗೆ ಸಿಎಂ ಆಗ್ತಿರುವ ಸಿದ್ದರಾಮಯ್ಯಗೆ ಶುಭಕೋರಿ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಜೊತೆಗೆ ಸಿದ್ದರಾಮಯ್ಯ ನಿವಾಸದ ಬಳಿ ಕೇಕ್ ಕತ್ತರಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ.
ಕುಮಾರಕೃಪ ರಸ್ತೆಯಲ್ಲಿರುವ ಸಿದ್ದರಾಮಯ್ಯ ಸರ್ಕಾರಿ ನಿವಾಸದ ಬಳಿ ಸಿಎಂ ಸಿದ್ದರಾಮಯ್ಯ 2.0 ಎಂಬ ಬರಹವುಳ್ಳ ಸುಮಾರು 7 ಕೆಜಿ ತೂಕದ ಕೇಕ್ ಕಟ್ ಮಾಡಿ ಸಂಭ್ರಮಾಚರಣೆ ಮಾಡಿದರು. ಸಿದ್ದರಾಮಯ್ಯ ಸರ್ಕಾರಿ ನಿವಾಸ ಮುಂಭಾಗದ ನಾಮಫಲಕಕ್ಕೆ ಮಲ್ಲಿಗೆ ಹಾರ ಹಾಕಿ, ಪಟಾಕಿ ಸಿಡಿಸಿ, ಸಿಹಿ ಹಂಚಿದರು. ಅಲ್ಲದೇ ಸಿದ್ದು ಹೆಸರಲ್ಲಿ ಅಭಿಮಾನಿಗಳು ಬನ್ನೇರುಘಟ್ಟದ ಪುರಾತನಕಾಲದ ಚಂಪಕದಾಮ ದೇವಾಲಯದಲ್ಲಿ ಅರ್ಚನೆ ಮಾಡಿಸಿ ಪ್ರಸಾದವನ್ನು ತಂದು ಹಂಚಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel