Advertisement
ಪ್ರಮುಖ

ಹಳೆ ಸಂಸತ್‌ ಭವನಕ್ಕೆ ಬೀಳ್ಕೊಡುಗೆ | ನೆಹರೂ ಸ್ಮರಿಸಿದ ಪ್ರಧಾನಿ ಮೋದಿ | ಹಳೆ ಸಂಸತ್ ಭವನ ನಮಗೆಂದಿಗೂ ಪ್ರೇರಣೆ |

Share

ಹಳೆಯ ಸಂಸತ್‌ ಭವನ ದೇಶದ ಏಳಿಗೆಯ, ಅಭಿವೃದ್ಧಿಯ ಹಾಗೂ ಪ್ರಜಾಪ್ರಭುತ್ವ ಸಂಕೇತವಾಗಿದೆ. ಸಂಸತ್‌ ಭವನವನ್ನು ಬ್ರಿಟಿಷರು ನಿರ್ಮಿಸಿದರೂ, ಇದರ ನಿರ್ಮಾಣಕ್ಕೆ ಭಾರತೀಯರ ಬೆವರು ಹರಿದಿದೆ, ಭಾರತೀಯರ ಹಣ ಖರ್ಚಾಗಿದೆ. ನಾವು ಹೊಸ ಸಂಸತ್‌ ಭವನ ಪ್ರವೇಶಿಸುತ್ತಿದ್ದರೂ, ಮುಂಬರುವ ಪೀಳಿಗೆಗೆ ಹಳೆಯ ಸಂಸತ್‌ ಭವನದ ಇತಿಹಾಸ, ಶ್ರೇಷ್ಠತೆ, ಕೊಡುಗೆಯನ್ನು ನೀಡಿದೆ. ಹಳೇ ಸಂಸತ್‌ ಭವನಕ್ಕೆ ಬೀಳ್ಕೊಡುಗೆ ನೀಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮೊದಲ ಪ್ರಧಾನಿಯಾಗಿದ್ದ ಜವಾಹರಲಾಲ್‌ ನೆಹರೂ ಅವರನ್ನು ಸ್ಮರಿಸಿದ್ದಾರೆ.

Advertisement
Advertisement
Advertisement
Advertisement
Advertisement

ಸಂಸತ್ತಿನಲ್ಲಿ ಜವಾಹರಲಾಲ್ ನೆಹರೂ  ಅವರ ಐತಿಹಾಸಿಕ ‘ಎ ಟ್ರೈಸ್ಟ್ ವಿತ್ ಡೆಸ್ಟಿನಿ’ ಭಾಷಣದ ಪ್ರತಿಧ್ವನಿಯು ದೇಶದ ಚುನಾಯಿತ ಪ್ರತಿನಿಧಿಗಳಿಗೆ ಸ್ಫೂರ್ತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ  ಇಂದು ಹೇಳಿದ್ದಾರೆ. ಪ್ರಧಾನಿ ಮೋದಿ, ಹಳೆಯ ಸಂಸತ್ತಿನ ಕಟ್ಟಡದ ಸುಮಾರು ಎಂಟು ದಶಕಗಳ ಪ್ರಯಾಣ ಕುರಿತು ಮಾತನಾಡಿದ್ದಾರೆ. “ಸಂಸತ್ತಿನಲ್ಲಿ ನೆಹರೂ ಮಾಡಿದ ಮಧ್ಯರಾತ್ರಿಯ ಭಾಷಣ ಈಗಲೂ ಪ್ರತಿಧ್ವನಿಸುತ್ತಿದೆ. ಅಟಲ್ ಬಿಹಾರಿ ವಾಜಪೇಯಿ ಅವರು, ಸರ್ಕಾರಗಳು ಬರುತ್ತವೆ ಮತ್ತು ಹೋಗುತ್ತವೆ. ಆದರೆ ಈ ದೇಶ ಉಳಿಯುತ್ತದೆ ಎಂದು ಹೇಳಿದ್ದೂ ಈ ಸದನದಲ್ಲೇ. ಸಂಸತ್ತಿನ ಐತಿಹಾಸಿಕ ಪಯಣದಲ್ಲಿ ಭಾಗಿಯಾದ ಪ್ರತಿಯೊಬ್ಬರನ್ನು ನೆನಪಿಸಿಕೊಳ್ಳುವ ಸಂದರ್ಭ ಇದಾಗಿದೆ” ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡಿದ್ದಾರೆ.

Advertisement

ರಾಜೇಂದ್ರ ಪ್ರಸಾದ್ ಅವರಿಂದ ಹಿಡಿದು ರಾಮನಾಥ್ ಕೋವಿಂದ್, ದ್ರೌಪದಿ ಮುರ್ಮು ಅವರ ವರೆಗೆ ಎಲ್ಲರ ಮಾರ್ಗದರ್ಶನವನ್ನು ಈ ಸಂಸತ್ತು ಪಡೆದುಕೊಂಡಿದೆ. ಜವಾಹರಲಾಲ್ ನೆಹರೂ, ಲಾಲ್ ಬಹದ್ದೂರ್ ಶಾಸ್ತ್ರಿ, ಅಟಲ್ ಬಿಹಾರಿ ವಾಜಪೇಯಿ, ಮನಮೋಹನ್ ಸಿಂಗ್ ಅವರ ಕಾಲಕ್ಕೂ ಈ ಸಂಸತ್ತು ಸಾಕ್ಷಿಯಾಗಿದೆ. ಸಂಸತ್ತಿನ ಕಲಾಪಗಳು ಈಗ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಬಹುದು. ಆದರೆ ಈ ಕಟ್ಟಡವು ಭವಿಷ್ಯದ ಪೀಳಿಗೆಗೆ ಯಾವಾಗಲೂ ಸ್ಫೂರ್ತಿ ನೀಡುತ್ತದೆ ಎಂದು ತಿಳಿಸಿದ್ದಾರೆ.

ಆಗಸ್ಟ್ 15, 1947 ಭಾರತಕ್ಕೆ ಸ್ವಾತಂತ್ರ್ಯ ಬಂದ ದಿನ. ಅಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ದೇಶದ ಮೊದಲ ಪ್ರಧಾನಿ ನೆಹರೂ, “ಈ ತಡರಾತ್ರಿಯಲ್ಲಿ ಜಗತ್ತೇ ಮಲಗಿರುವಾಗ, ಭಾರತ ಜೀವನ ಮತ್ತು ಸ್ವಾತಂತ್ರ್ಯಕ್ಕೆ ಎಚ್ಚರಗೊಂಡಿದೆ” ಎಂದು ಹೇಳಿದ್ದರು. ಸಂಸತ್ತಿನ ವಿಶೇಷ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಹಳೆ ಸಂಸತ್ತಿನಲ್ಲಿ ಮೊದಲ ದಿನದ ಅಧಿವೇಶನ ನಡೆಯಿತು. ಮಂಗಳವಾರ ಸಂಸತ್‌ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ.

Advertisement

(News Agencies)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

2 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

3 hours ago

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…

4 hours ago

ಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕು

ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…

4 hours ago

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

2 days ago