Advertisement
MIRROR FOCUS

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

Share

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಲ್ಲಿ ಆಕಸ್ಮಿಕ ಸಾವುಗಳನ್ನು ತಡೆಗಟ್ಟಲು ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ರೈತರು ಕಡ್ಡಾಯವಾಗಿ ತಂತಿ ಬೇಲಿ ಅಳವಡಿಸಿ, ಎಚ್ಚರಿಕೆ ಸೂಚನಾ ಫಲಕಗಳನ್ನು ಪ್ರದರ್ಶಿಸಬೇಕು ಎಂದು ಕೃಷಿ ಇಲಾಖೆಯ ಜಿಲ್ಲಾ ಜಂಟಿ ನಿರ್ದೇಶಕಿ ಕಲಾವತಿ ಬಿ.ಜಿ. ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಕೃಷಿ ಹೊಂಡ, ಕ್ಷೇತ್ರ ಬದು, ಪಾಲಿಥಿನ್ ಹೊದಿಕೆ, ತಂತಿ ಬೇಲಿ, ಪಂಪ್‌ಸೆಟ್ ಹಾಗೂ ಸೂಕ್ಷ್ಮ ನೀರಾವರಿ ಘಟಕಗಳನ್ನು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಯಿಂದ ಮಳೆನೀರಿನ ಸಂಗ್ರಹಣೆ ಹೆಚ್ಚಾಗಿ ಕೃಷಿ ಚಟುವಟಿಕೆಗಳಿಗೆ ನೆರವಾಗುತ್ತಿದೆ.

ಆದರೆ, ಕೃಷಿ ಹೊಂಡಗಳಲ್ಲಿ ನೀರು ಸಂಗ್ರಹವಾಗಿರುವ ಸಂದರ್ಭಗಳಲ್ಲಿ ಮಕ್ಕಳು, ಸಾರ್ವಜನಿಕರು ಅಥವಾ ಜಾನುವಾರುಗಳು ಆಕಸ್ಮಿಕವಾಗಿ ಹೊಂಡಕ್ಕೆ ಬಿದ್ದು ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇರುವುದರಿಂದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯವಾಗಿದೆ ಎಂದು ಇಲಾಖೆ ತಿಳಿಸಿದೆ.

ಹೀಗಾಗಿ ಕೃಷಿ ಹೊಂಡಗಳ ಸುತ್ತ ತಂತಿ ಬೇಲಿ ಅಳವಡಿಸುವುದರ ಜೊತೆಗೆ, ಅಪಾಯದ ಬಗ್ಗೆ ಎಚ್ಚರಿಕೆ ನೀಡುವ ಸೂಚನಾ ಫಲಕಗಳನ್ನು ಅಳವಡಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ರೈತರಿಗೆ ಸಲಹೆ ನೀಡಲಾಗಿದೆ.

ಕೃಷಿ ಇಲಾಖೆ ಅಧಿಕಾರಿಗಳು ಸಹ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ ಅಗತ್ಯ ಸಲಹೆ ಹಾಗೂ ಮಾರ್ಗದರ್ಶನ ನೀಡಲಿದ್ದಾರೆ ಎಂದು ತಿಳಿಸಲಾಗಿದೆ.

The Agriculture Department has urged farmers in Bengaluru Rural district to install fencing and warning boards around farm ponds created under the Krishi Bhagya Scheme. The move aims to prevent accidental deaths and ensure public safety around water-filled farm ponds.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬೆಳೆ ವಿಸ್ತರಣೆಗೆ ವೈಜ್ಞಾನಿಕ ನಿಯಂತ್ರಣ ಅಗತ್ಯ – ಸಮಗ್ರ ಕೃಷಿ ನೀತಿ ಅನಿವಾರ್ಯ

ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಹೆಚ್ಚುತ್ತಿರುವ ಅಡಿಕೆ ಬೆಳೆ ವಿಸ್ತರಣೆಯನ್ನು ವೈಜ್ಞಾನಿಕವಾಗಿ ನಿಯಂತ್ರಿಸಲು…

1 hour ago

ಕಬ್ಬಿನ ಬೆಲೆ ನಿಗದಿ – ರೈತರ ಬೇಡಿಕೆಗಳತ್ತ ಸರ್ಕಾರದ ಗಮನ

ಕಬ್ಬು ಬೆಳೆಗಾರರ ಬೇಡಿಕೆಗಳು ಮತ್ತು ಕಬ್ಬಿನ ಬೆಲೆ ನಿಗದಿ ಕುರಿತು ಮುಖ್ಯಮಂತ್ರಿ ಡಿ.ಕೆ.…

2 hours ago

ನದಿ ತೀರಗಳ ಮಾಲಿನ್ಯ ಆತಂಕಕಾರಿ: ತಲಕಾವೇರಿಯಲ್ಲಿ ಕಾವೇರಿ ಜಾಗೃತಿ ರಥಯಾತ್ರೆಗೆ ಚಾಲನೆ

ನದಿ ತೀರಗಳು ತ್ಯಾಜ್ಯಗಳಿಂದ ಕಲುಷಿತಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಅರಮೇರಿ ಕಳಂಚೇರಿ ಮಠದ…

2 hours ago

ಹವಾಮಾನ ವರದಿ| 26.10.2026 | ಕರ್ನಾಟಕದಲ್ಲಿ ಬಿಸಿಲು, ಒಣಹವೆ ಮುಂದುವರಿಕೆ: ನವೆಂಬರ್ ಮೊದಲ ವಾರದಲ್ಲಿ ಮತ್ತೆ ಮಳೆಯ ಮುನ್ಸೂಚನೆ

ಕರ್ನಾಟಕದಾದ್ಯಂತ ಅ.27ರಿಂದ ಬಿಸಿಲು ಹಾಗೂ ಒಣಹವೆ ಮುಂದುವರಿಯುವ ಮುನ್ಸೂಚನೆ ಇದೆ. ಅರ್ನಬ್ ಚಂಡಮಾರುತದ…

21 hours ago

ಸಾಮಾಜಿಕ ಮಾಧ್ಯಮವೆಂಬ ಮಾಯೆ – ಸಂಪರ್ಕದ ಜಾಲದಲ್ಲಿ ಸಿಲುಕುತ್ತಿರುವ ಮನುಷ್ಯ

ಸಾಮಾಜಿಕ ಮಾಧ್ಯಮವು ಸಂಪರ್ಕ ಮತ್ತು ಮಾಹಿತಿ ವಿನಿಮಯಕ್ಕೆ ಹೊಸ ಅವಕಾಶಗಳನ್ನು ನೀಡಿದರೂ, ಅದರ…

1 day ago

ಕರ್ನಾಟಕದಲ್ಲಿ ಇಂದಿನಿಂದ ಒಣಹವೆ : ಮತ್ತೆ ಯಾವಾಗ ಮಳೆ?

ಅಕ್ಟೋಬರ್ ಅಂತ್ಯದವರೆಗೆ ಕರ್ನಾಟಕದಲ್ಲಿ ಬಹುತೇಕ ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು, ಕರಾವಳಿ ಮತ್ತು ಕಲ್ಯಾಣ…

1 day ago