ರೈತರ ಮಕ್ಕಳಿಗೆ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಿಷ್ಯವೇತನವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ. ಕೃಷಿ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ರಫೀ ಅಹಮದ್ ಎಂ.ಎಸ್ ನಡವಳಿಕೆಗಳನ್ನು ಹೊರಡಿಸಿದ್ದರು.
ಸಚಿವ ಸಂಪುಟದಲ್ಲಿ ತೆಗೆದುಕೊಂಡಿರುವ ನಿರ್ಣಯದಂತೆ ಈ ಹೊಸ ಶಿಷ್ಯವೇತನ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದಿದ್ದಾರೆ. ಪದವಿಯ ಮುಂಚೆ ಪಿಯುಸಿ, ಐಟಿಐ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ರೂ 2,500 ವಿದ್ಯಾರ್ಥಿನಿಯರಿಗೆ ರೂ 3,000 ಸ್ಕಾಲರ್ ಶಿಪ್ ನೀಡಲಾಗುವುದು. ಎಲ್ಲಾ ಬಿಎ, ಬಿಎಸ್ಸಿ, ಬಿಕಾಂ ಇತ್ಯಾದಿ ಹಾಗೂ ಎಂಬಿಬಿಎಸ್, ಬಿಇ, ಬಿಟೆಕ್ ಮತ್ತು ವೃತ್ತಿಪರ ಕೋರ್ಸ್ ಹೊರತುಪಡಿಸಿ ವಿದ್ಯಾರ್ಥಿಗಳಿಗೆ ರೂ 5,000. ವಿದ್ಯಾರ್ಥಿನಿಯರಿಗೆ ರೂ. 5,500 ಎಲ್‌ಎಲ್‌ಬಿ, ಪ್ಯಾರಾ ಮೆಡಿಕಲ್, ಬಿ ಫಾರ್ಮ್, ನರ್ಸಿಂಗ್ ಇತ್ಯಾದಿ ವೃತ್ತಿಪರ ಕೋರ್ಸ್ ಗಳಿಗೆ ವಿದ್ಯಾರ್ಥಿಗಳಿಗೆ ರೂ. 7,500, ವಿದ್ಯಾರ್ಥಿನಿಯರಿಗೆ ರೂ. 8,000 ಶಿಷ್ಯ ವೇತನ ದೊರೆಯಲಿದೆ. ಎಂಬಿಬಿಎಸ್, ಬಿಇ, ಬಿಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ರೂ.10,000. ವಿದ್ಯಾರ್ಥಿನಿಯರಿಗೆ 11,000 ಸಿಗಲಿದೆ.
ಈ ಶಿಷ್ಯವೇತನವನ್ನು ಪಡೆಯುವವರು ಕರ್ನಾಟಕ ರಾಜ್ಯದವರು ಮಾತ್ರ ಅರ್ಹರಾಗುತ್ತಾರೆ. ರೈತ ಮಕ್ಕಳ ತಂದೆ-ತಾಯಿ ಇಬ್ಬರು ಕೃಷಿ ಜಮೀನನ ಒಡೆಯರಾಗಿರಬೇಕು , ಮಾತ್ರವಲ್ಲದೆ ಒಂದು ಶಿಷ್ಯವೇತನಕ್ಕೆ ಮಾತ್ರ ರೈತರ ಮಕ್ಕಳು ಅರ್ಹರಾಗಿರುತ್ತಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…