Advertisement
MIRROR FOCUS

ರೈತ‌ ಸ್ನೇಹಿ ಕೃಷಿ ಭಾಗ್ಯ ಯೋಜನೆ | ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗೆ ಮರು ಚಾಲನೆ‌

Share

2023-24 ನೇ ಸಾಲಿನಲ್ಲೇ‌ ಕೃಷಿ ಭಾಗ್ಯ ಯೋಜನೆ(Krushi Bhagya jyothi) ಜಾರಿಗೆ 200 ಕೋಟಿಗಳ ಅನುದಾನ ಒದಗಿಸಿದ್ದು, 2014 ರ ಕೃಷಿ ನೀತಿ(Agricultural policy) ಅನ್ವಯ ರಾಜ್ಯದ ‌24 ಜಿಲ್ಲೆಗಳ 106 ಮಳೆಯಾಶ್ರಿತ ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ(State Govt) ತೀರ್ಮಾನಿಸಿದ್ದು ಕೃಷಿ ಇಲಾಖೆಯು(Agricultural department) ಅಧಿಕೃತ ಆದೇಶ ಹೊರಡಿಸಿದೆ.

Advertisement
Advertisement
Advertisement

2023-24 ನೇ ಸಾಲಿನ‌ ಪೂರಕ ಅಂದಾಜು 1 ರಲ್ಲಿ 100ಕೋಟಿಗಳ ಹೆಚ್ಚುವರಿ ಅನುದಾನವನ್ನು ಆರ್ಥಿಕ ಇಲಾಖೆಯಿಂದ ಒದಗಿಸಲಾಗುವುದು ಮತ್ತು 100 ಕೋಟಿಗಳ ಅನುದಾನವನ್ನು ಕಂದಾಯ ಇಲಾಖೆಯಿಂದ (ವಿಪತ್ತು ನಿರ್ವಹಣೆ) ಪಡೆದುಕೊಳ್ಳಲು ಕ್ರಮವಹಿಸಲಾಗುವುದೆಂದು ಆದೇಶದಲ್ಲಿ ತಿಳಿಸಲಾಗಿದೆ. 2014 ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಯಾಗಿದ್ದ ವೇಳೆ ಕೃಷಿ ಭಾಗ್ಯ ಯೋಜನೆ ಜಾರಿಗೊಳಿಸಲಾಗಿತ್ತು. ರೈತರ ಜಮೀನಿನಲ್ಲಿ ಬಿದ್ದ ಮಳೆ ನೀರನ್ನು ಸೂಕ್ತ ಸ್ಥಳದಲ್ಲಿ ಹೊಂಡ ತೆಗೆದು ಸಂಗ್ರಹಣೆ ಮಾಡಿ ಬೆಳೆಗಳಿಗೆ ಸಂಕಷ್ಟ ಪರಿಸ್ಥಿತಿಯಲ್ಲಿ ನೀರನ್ನು ಒದಗಿಸಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗಿತ್ತು.

Advertisement

ಸಿದ್ದರಾಮಯ್ಯ ಮತ್ತೋಮ್ಮೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಕೃಷಿ ಭಾಗ್ಯ ಯೋಜನೆ ಮರು ಜಾರಿಗೆ ಮನವಿ ಸಲ್ಲಿಸಿದ್ದರು. ಕೃಷಿ ಸಚಿವರ ಕೋರಿಕೆಗೆ ಸ್ಪಂದಿಸಿದ ಮುಖ್ಯ ಮಂತ್ರಿಯವರು ಸೆ 12 ,13 ರಂದು ನಡೆದ ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಸಭೆಯಲ್ಲಿ  ಯೋಜನೆ ಜಾರಿಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ್ದರು.

ಈ ಹಿನ್ನಲೆಯಲ್ಲಿ ಆರ್ಥಿಕ ಇಲಾಖೆ, ಹಾಗೂ ಯೋಜನಾ ಇಲಾಖೆಯ ಸಹಮತದೊಂದಿಗೆ ನ.9 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೃಷಿ ಭಾಗ್ಯ ಯೋಜನೆ ಜಾರಿಗೆ ಅನುಮೋದನೆ ಪಡೆಯಲಾಗಿತ್ತು. ಸಚಿವ ಸಂಪುಟದ ನಿರ್ಧಾರದಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರ ಅನುಮೋದನೆ ಪಡೆದು ಕೃಷಿ ಇಲಾಖೆಯ ಅಧೀನ ಕಾರ್ಯದರ್ಶಿ ಪಿ ಸತ್ಯಭಾಮ ಅವರು ಜಿಲ್ಲೆಗಳಲ್ಲಿ ಕೃಷಿ ಭಾಗ್ಯ ಯೋಜನೆಗೆ ಅನುಷ್ಠಾನಕ್ಕೆ ಆದೇಶ ಹೊರಡಿಸಿದ್ದಾರೆ.

Advertisement
  • ಅಂತರ್ಜಾಲ ಮಾಹಿತಿ

200 crores grant has been provided for the implementation of Krishi Bhagya Yojana in the year 2023-24, and the state government has decided to implement it in 106 rain-fed taluks of 24 districts of the state according to the agricultural policy of 2014. The Department of Agriculture has issued an official order.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೋಲಾರದಲ್ಲಿ ಅತೀ ಹೆಚ್ಚು ನಕಲಿ ವೈದ್ಯರು…! | ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…

3 hours ago

ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮನವಿ

ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…

3 hours ago

ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ದೆಹಲಿಯಲ್ಲಿ ಲಭ್ಯ | 2.5 ಲಕ್ಷ ಲೀಟರ್ ಹಾಲು ದೆಹಲಿಗೆ ಪೂರೈಸಲು ತೀರ್ಮಾನ |

ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…

4 hours ago

ಹುಣಸೆ ಹಣ್ಣು ಸಂರಕ್ಷಣೆ, ಮಾರಾಟದ ತರಬೇತಿ ಕಾರ್ಯಾಗಾರ

ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…

4 hours ago

ಧರ್ಮಸ್ಥಳ ಯಕ್ಷಗಾನ ಮೇಳ |  ಸೇವೆ ಬಯಲಾಟ ಪ್ರದರ್ಶನ

ನಾಡಿನ ಪವಿತ್ರ ಕ್ಷೇತ್ರ  ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…

4 hours ago

ಜೇನು ತುಪ್ಪ ಮಾರಾಟ | ಅರ್ಜಿ ಆಹ್ವಾನ

ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…

4 hours ago