ಅತಿವೃಷ್ಠಿಯಿಂದ ಬೆಳೆ ಕಳೆದುಕೊಂಡವರ ಹಾಗೂ ಮಳೆ ವೈಫಲ್ಯದಿಂದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ಬಿಡುಗಡೆಯಾಗಿದೆ. 31 ಜಿಲ್ಲೆಗಳಲ್ಲಿ ಬೆಳೆ ನಷ್ಟ ಕಂಡುಬಂದ ಹಿನ್ನಲೆಯಲ್ಲಿ, ಸರ್ಕಾರವು ಎಸ್‍ಡಿಆರ್‍ಎಫ್ ಅಡಿಯಲ್ಲಿ ರೂ 324 ಕೋಟಿ ಅನುದಾನವನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಈ ಮೊತ್ತವನ್ನು ನಷ್ಟದ ಗಾತ್ರ ಮತ್ತು ಸ್ಥಳೀಯ ಪರಿಸ್ಥಿತಿಯನ್ನು ಪರಿಗಣಿಸಿ ಜಿಲ್ಲೆಗಳ ಆಡಳಿತದ ಮೂಲಕ ತಲುಪಿಸಲಾಗುತ್ತದೆ. ಒಟ್ಟಾಗಿ ರಾಜ್ಯದಲ್ಲಿ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ರೈತರ ಸಂಕಷ್ಟ ಗಮನಿಸಿದ ಸರ್ಕಾರ ಪರಿಹಾರವನ್ನು ನೀಡಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…