(ಸಾಂದರ್ಭಿಕ ಚಿತ್ರ)
ಜಲಾನಯನ ಅಭಿವೃದ್ಧಿ ಇಲಾಖೆಯಡಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ- ಜಲಾನಯನ ಅಭಿವೃದ್ಧಿ ಘಟಕ 2.0 ಯೋಜನೆಯಡಿ ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ 642.26 ಕೋಟಿ ಮಂಜೂರಾಗಿರುವುದಾಗಿ ಕೃಷಿ ಸಚಿವ ಬಿ.ಸಿ ಪಾಟೀಲ್ ಮಾಹಿತಿ ನೀಡಿದ್ದಾರೆ.
ಈ ಯೋಜನೆಯಡಿಯಲ್ಲಿ ಕೇಂದ್ರದಿಂದ ಶೇ.60 ರಾಜ್ಯದಿಂದ ಶೇ.40 ರ ಅನುಪಾತದಲ್ಲಿ ಯೋಜನೆಯ ವೆಚ್ಚವನ್ನು ಭರಿಸಲಾಗುತ್ತಿದ್ದು, ಸಮತಟ್ಟಾದ ಪ್ರದೇಶದ ಪ್ರತಿ ಹೆಕ್ಟೇರ್ ಜಲಾನಯನಗಳ ಉಪಚಾರಕ್ಕೆ 22 ಸಾವಿರ ರೂ. ಗುಡ್ಡಗಾಡು ಪ್ರದೇಶದ ಉಪಚಾರಕ್ಕೆ 28 ಸಾವಿರ ರೂ. ವರೆಗೆ ಅನುದಾನ ಲಭ್ಯವಾಗಲಿದೆ. ಈ ಯೋಜನೆಯನ್ನು ರಾಜ್ಯದ 2.75 ಲಕ್ಷ ಹೆಕ್ಟೇರ್ ಮಳೆಯಾಶ್ರಿತ ಪ್ರದೇಶವನ್ನು ಉಪಚರಿಸಲು ಅನುಮೋದನೆ ನೀಡಲಾಗಿದೆ ಎಂದರು.
ಮಳೆನೀರು ಕೊಯ್ಲು ಮೂಲಕ ಮಣ್ಣಿನ ತೇವಾಂಶ ಸಂರಕ್ಷಿಸುವುದು. ಪರ್ಯಾಯ ಬೆಳೆ ವ್ಯವಸ್ಥೆಗಳು, ಹವಾಮಾನ ವೈಪರೀತ್ಯ ಮತ್ತು ಬರಗಾಲದ ಅಪಾಯಗಳನ್ನು ಎದುರಿಸುವುದು, ಅಂತರ್ಜಲ ಹೆಚ್ಚಿಸಲು ಅನುಕೂಲವಾಗುತ್ತದೆ. ಆಸ್ತಿ ರಹಿತರಿಗೆ ಸ್ವಸಹಾಯ ಗುಂಪುಗಳನ್ನು ರಚಿಸಿ ಉತ್ತೇಜಿಸುವುದು, ವಿಕಲಚೇತನರು ಮತ್ತು ಮಹಿಳೆಯರಿಗೆ ಭೂಮಿ, ನೀರು ಜೀವರಾಶಿ ಸಂಪನ್ಮೂಲಗಳ ಹಂಚಿಕೆಯಲ್ಲಿ ಸಮಾನ ಪ್ರವೇಶ ಮತ್ತು ಅವಕಾಶ ಹಾಗೂ ಎಫ್.ಪಿ.ಒ ಬಳಕೆದಾರರ ಗುಂಪುಗಳು ಮುಂತಾದ ವಿವಿಧ ಸಮುದಾಯ ಸಂಸ್ಥೆಗಳಲ್ಲಿ ಈ ವರ್ಗಗಳ ಜನರಿಗೆ ಸದಸ್ಯತ್ವ ನೀಡಲು ಉತ್ತೇಜಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…