ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಪಾರಂಪರಿಕ ಮಾಗಿ ಉಳುಮೆ ಮಾಡಿದರೆ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಕೃಷಿ ಜಂಟಿ ನಿರ್ದೇಶಕಿ ಕಲಾವತಿ ತಿಳಿಸಿದ್ದಾರೆ. ಈ ಕುರಿತು ರೈತರಿಗೆ ಮಾಹಿತಿ ನೀಡಿರುವ ಅವರು, ಬಹುತೇಕ ರೈತರು ಮಾಗಿ ಉಳುಮೆ ಮಾಡುವುದನ್ನು ಮರೆತಿರುವುದರಿಂದ ಅನೇಕ ರೀತಿಯ ಸಸ್ಯರೋಗ, ಕೀಟರೋಗ ಭಾದೆ ಹೆಚ್ಚಾಗಲು ಕಾರಣವಾಗಿದೆ. ರೈತರು ಈ ಸಮಯದ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ.
ಜನವರಿ ಮತ್ತು ಫೆಬ್ರವರಿ ತಿಂಗಳೊಳಗೆ ರೈತರು ಬೆಳೆದ ಕೃಷಿ ಬೆಳೆಗಳನ್ನು ಕಟಾವು ಮಾಡಲು ಸೂಕ್ತ ಸಮಯವಾಗಿದೆ. ಭೂಮಿಯನ್ನು ಹದವಾಗಿ ಉಳುಮೆ ಮಾಡಬೇಕು. ಅಂದರೆ, ಪೂರ್ಣ ಅವಧಿ ಮುಗಿದ ನಂತರ ಮುಂದಿನ ಹಂಗಾಮಿನಲ್ಲಿ ಬೆಳೆ ಬೆಳೆಯಲು ಭೂಮಿ ಸಿದ್ಧಗೊಳಿಸುವುದಕ್ಕೆ ಮಾಗಿ ಉಳುಮೆ ಎನ್ನುವರು. ಸಾಮಾನ್ಯವಾಗಿ ನೀರಾವರಿ ಸೌಲಭ್ಯವಿದ್ದಲ್ಲಿ ಮಾತ್ರ ರೈತರು ಬೇಸಿಗೆ ಹಂಗಾಮಿನಲ್ಲಿ ಬೆಳೆಗಳನ್ನು ಬೆಳೆಯುತ್ತಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel