2026-27ನೇ ಸಾಲಿಗೆ ತೋಟಗಾರಿಕೆ ಇಲಾಖೆಯಿಂದ ರೈತರ ಮಕ್ಕಳಿಗಾಗಿ ವಿಶೇಷ 10 ತಿಂಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ತರಬೇತಿ ತೋಟಗಾರಿಕಾ ಇಲಾಖೆಯ ವತಿಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ಮಾತ್ರ 8 ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಸರ್ಕಾರದ ಮೀಸಲಾತಿ ನಿಯಮಾವಳಿಗಳನ್ನು ಅನುಸರಿಸಿ, ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು, ತಂದೆ/ತಾಯಿ/ಪೋಷಕರು ಕೃಷಿ ಜಮೀನು ಹೊಂದಿರಬೇಕು ಹಾಗೂ ಪಹಣಿ ಸಲ್ಲಿಕೆ ಕಡ್ಡಾಯವಾಗಿದೆ. ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಏಪ್ರಿಲ್ 15, ಸಂದರ್ಶನ ದಿನಾಂಕ: ಏಪ್ರಿಲ್ 23 (ಬೆಳಿಗ್ಗೆ) ಹಾಗೂ ಆಯ್ಕೆ ಪಟ್ಟಿ ಪ್ರಕಟಣೆ: ಏಪ್ರಿಲ್ 27.
ಅರ್ಜಿ ಶುಲ್ಕ : ಸಾಮಾನ್ಯ ಅಭ್ಯರ್ಥಿಗಳು: ₹30 ಹಾಗೂ ಪರಿಶಿಷ್ಟ ಜಾತಿ/ಪಂಗಡ & ಅಂಗವಿಕಲರು: ₹15
ವಯೋಮಿತಿ : ಕನಿಷ್ಠ ವಯಸ್ಸು: 18 ವರ್ಷ, ಗರಿಷ್ಠ ವಯಸ್ಸು: ಸಾಮಾನ್ಯ: 30 ವರ್ಷ, ಪ.ಜಾತಿ/ಪ.ಪಂಗಡ: 33 ವರ್ಷ,ಮಾಜಿ ಸೈನಿಕರು: 33 ರಿಂದ 65 ವರ್ಷ
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ನಮೂನೆ:
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿ : ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತೋಟಗಾರಿಕೆ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
The Karnataka Horticulture Department has invited applications for a 10-month training program for farmers’ children for the year 2026-27. Only 8 candidates from Dakshina Kannada will be selected based on merit and reservation norms. Eligible candidates must apply before April 15.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…