Advertisement
ಮಾಹಿತಿ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

Share

2026-27ನೇ ಸಾಲಿಗೆ ತೋಟಗಾರಿಕೆ ಇಲಾಖೆಯಿಂದ ರೈತರ ಮಕ್ಕಳಿಗಾಗಿ ವಿಶೇಷ 10 ತಿಂಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ತರಬೇತಿ ತೋಟಗಾರಿಕಾ ಇಲಾಖೆಯ ವತಿಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಮಾತ್ರ 8 ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಸರ್ಕಾರದ ಮೀಸಲಾತಿ ನಿಯಮಾವಳಿಗಳನ್ನು ಅನುಸರಿಸಿ, ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು, ತಂದೆ/ತಾಯಿ/ಪೋಷಕರು ಕೃಷಿ ಜಮೀನು ಹೊಂದಿರಬೇಕು ಹಾಗೂ ಪಹಣಿ ಸಲ್ಲಿಕೆ ಕಡ್ಡಾಯವಾಗಿದೆ.  ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಏಪ್ರಿಲ್ 15,  ಸಂದರ್ಶನ ದಿನಾಂಕ: ಏಪ್ರಿಲ್ 23 (ಬೆಳಿಗ್ಗೆ) ಹಾಗೂ  ಆಯ್ಕೆ ಪಟ್ಟಿ ಪ್ರಕಟಣೆ: ಏಪ್ರಿಲ್ 27.

ಅರ್ಜಿ ಶುಲ್ಕ :  ಸಾಮಾನ್ಯ ಅಭ್ಯರ್ಥಿಗಳು: ₹30 ಹಾಗೂ ಪರಿಶಿಷ್ಟ ಜಾತಿ/ಪಂಗಡ & ಅಂಗವಿಕಲರು: ₹15

ವಯೋಮಿತಿ :  ಕನಿಷ್ಠ ವಯಸ್ಸು: 18 ವರ್ಷ, ಗರಿಷ್ಠ ವಯಸ್ಸು: ಸಾಮಾನ್ಯ: 30 ವರ್ಷ, ಪ.ಜಾತಿ/ಪ.ಪಂಗಡ: 33 ವರ್ಷ,ಮಾಜಿ ಸೈನಿಕರು: 33 ರಿಂದ 65 ವರ್ಷ

ಅರ್ಜಿ ಸಲ್ಲಿಸುವ ವಿಧಾನ: 

ಅರ್ಜಿ ನಮೂನೆ:

  • ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯ
  • ಅಥವಾ ಮಂಗಳೂರು ತೋಟಗಾರಿಕೆ ಕಚೇರಿಯಲ್ಲಿ ಪಡೆಯಬಹುದು

ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿ :  ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತೋಟಗಾರಿಕೆ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

The Karnataka Horticulture Department has invited applications for a 10-month training program for farmers’ children for the year 2026-27. Only 8 candidates from Dakshina Kannada will be selected based on merit and reservation norms. Eligible candidates must apply before April 15.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

17 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

1 day ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago