ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಬೆಳೆ ವಿಮೆಯಿಂದ ರೈತರಿಗೆ ಕನಿಷ್ಠ ಪರಿಹಾರ ದೊರಕುತ್ತಿರುವ ಕುರಿತು ರೈತರ ದೂರುಗಳ ಬಗ್ಗೆ ಉನ್ನತ ಮಟ್ಟದ ಸಭೆ ದೆಹಲಿಯಲ್ಲಿ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ಪರಿಹಾರ ಸಂಬಂಧಿಸಿದಂತೆ ಸಾಕಷ್ಟು ದೂರುಗಳನ್ನು ನೀಡುತ್ತಿದ್ದಾರೆ. ಅವುಗಳನ್ನು ಆದ್ಯತೆ ಮೇಲೆ ಪರಿಹರಿಸಬೇಕಿದೆ. ಕೆಲವು ರೈತರು ಅತಿ ಕಡಿಮೆ ಪರಿಹಾರವನ್ನು ಪಡೆಯುತ್ತಿದ್ದಾರೆ. ಇವೆಲ್ಲ ಗಂಭೀರ ವಿಚಾರಗಳಾಗಿವೆ. ಇಂತಹ ಸಮಸ್ಯೆಗಳನ್ನು ಮುಂದುವರಿಯಲು ಬಿಡಬಾರದು ಎಂದರು. ಅಲ್ಲದೆ, ಇಂತಹ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ವಿಮಾ ಕಂಪನಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಬೇಕು. ಬೆಳೆ ಪರಿಹಾರ ನಷ್ಟವನ್ನು ಸರಿಯಾದ ಪ್ರಮಾಣದಲ್ಲಿ ಮಾರ್ಗಸೂಚಿಗೆ ಅನುಗುಣವಾಗಿ ನಿಗದಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೆಲವು ರಾಜ್ಯಗಳಲ್ಲಿ ರೈತರಿಗೆ ಸಬ್ಸಿಡಿ ನೀಡುವಲ್ಲಿ ವಿಳಂಬವಾಗುತ್ತಿದೆ ಎಂಬುದನ್ನು ಉಲ್ಲೇಖಿಸಿದ ಸಚಿವರು, ಎಲ್ಲ ರಾಜ್ಯಗಳು ಸಮನ್ವಯದೊಂದಿಗೆ ಸಕಾಲದಲ್ಲಿ ತಮ್ಮ ಪಾಲಿನ ಅನುದಾನವನ್ನು ಠೇವಣಿ ಮಾಡಿದರೆ ರೈತರಿಗೆ ನಿಗದಿತ ಸಮಯದಲ್ಲಿ ಸಬ್ಸಿಡಿ ಬಿಡುಗಡೆಗೆ ಅನುಕೂಲವಾಗುತ್ತದೆ ಎಂದರು.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…