ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ ತಂತ್ರಜ್ಞಾನಗಳು ಮತ್ತು ಸಾಧನಗಳ ಮೂಲಕ ಪತ್ತೆ ಹಚ್ಚಲು ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದು ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ದೆಹಲಿಯಲ್ಲಿ ಭಾರತೀಯ ಕೃಷಿ ಸಂಶೋಧನಾ ಮಂಡಳಿ-ICARನ 96ನೇ ವಾರ್ಷಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇದೀಗ ನಾವಿನ್ಯತೆ, ಸುಸ್ಥಿರ ಅಭಿವೃದ್ಧಿ ಮತ್ತು ಕೃಷಿ ವಲಯದಲ್ಲಿ ರೈತ ಕಲ್ಯಾಣಕ್ಕೆ ಒತ್ತು ನೀಡಲಾಗಿದೆ. ರಾಷ್ಟ್ರ ನಿರ್ಮಾಣದಲ್ಲಿ ರೈತರ ಕೊಡುಗೆ ಅಪಾರ. ಇದೀಗ ಸಂಶೋಧನೆಗಳು ಕೇವಲ ಪ್ರಯೋಗಾಲಯದಲ್ಲಿ ನಡೆಯುತ್ತಿಲ್ಲ, ರೈತರ ಹೊಲಗಳಲ್ಲಿ ನಡೆಯುತ್ತಿದೆ ಎಂದು ತಿಳಿಸಿದರು. ಭಾರತ, ವಿಶ್ವದ ಅತಿದೊಡ್ಡ ಆಹಾರ ಉತ್ಪಾದನಾ ರಾಷ್ಟ್ರವಾಗುತ್ತಿರುವುದನ್ನು ಯಾರೊಬ್ಬರೂ ತಡೆಯಲು ಸಾಧ್ಯವಿಲ್ಲ. ಶ್ರಮ ವಹಿಸಿ ದುಡಿಯುವ ರೈತರು ಮತ್ತು ಫಲವತ್ತಾದ ಭೂಮಿಯಿಂದಾಗಿ, ದೇಶದಲ್ಲಿ ಆಹಾರ ಉತ್ಪಾದನೆ ಗಣನೀಯವಾಗಿ ಹೆಚ್ಚಾಗುತ್ತಿದೆ ಎಂದರು.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…