ಕೇಂದ್ರ ಸರ್ಕಾರದ(Central Govt) ರೈತ ನೀತಿ, ಕನಿಷ್ಠ ಬೆಂಬಲ ಬೆಲೆ (MSP) ಖಾತರಿ ಕಾನೂನು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು(Farmer) ದೆಹಲಿ ಚಲೋ(Delhi Chalo) ಪ್ರತಿಭಟನೆಯನ್ನು(Protest) ನಡೆಸುತ್ತಿದ್ದಾರೆ. ಇಂದು ದೆಹಲಿ ರಾಮಲೀಲಾ ಮೈದಾನದಲ್ಲಿ(Ramleela Ground) ರೈತರು ‘ಮಹಾಪಂಚಾಯತ್’(Mahapanchayat) ಹಮ್ಮಿಕೊಂಡಿದ್ದಾರೆ.
ದೆಹಲಿ ಚಲೋ ಹಮ್ಮಿಕೊಂಡಿರುವ ರೈತರನ್ನು ಪಂಜಾಬ್-ಹರಿಯಾಣದ ಖಾನೌರಿ ಮತ್ತು ಶಂಭು ಗಡಿಗಳಲ್ಲಿ ಹರಿಯಾಣದ ಬಿಜೆಪಿ ಸರ್ಕಾರದ ಪೊಲೀಸರು ತಡೆದಿದ್ದಾರೆ. ಫೆ.13ರಂದು ದೆಹಲಿ ಚಲೋ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿರುವ ರೈತರು, ಇನ್ನೂ ಕೂಡ ಗಡಿಗಳಲ್ಲೇ ಇದ್ದಾರೆ. ಈ ನಡುವೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ‘ಕಿಸಾನ್ ಮಝ್ದೂರ್ ಮಹಾಪಂಚಾಯತ್’ ಎಂಬ ಹೆಸರಿನಲ್ಲಿ ದೆಹಲಿಯಲ್ಲಿ ಸಭೆ ಆಯೋಜಿಸಿದೆ. ರೈತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇವಲ 5,000 ಮಂದಿ ಮಾತ್ರ ಪಾಲ್ಗೊಳ್ಳಬೇಕು, ಕೋಲು, ಬಡಿಗೆಯ ಅಥವಾ ಯಾವುದೇ ಹರಿತವಾದ ಆಯುಧಗಳು, ಮತ್ತು ಟ್ರ್ಯಾಕ್ಟರ್‌ಗಳನ್ನು ತರಬಾರದು ಎಂದು ಮಹಾ ಪಂಚಾಯತ್‌ಗೆ ಅನುಮತಿ ನೀಡುವಾಗ ದೆಹಲಿ ಪೊಲೀಸರು ಸೂಚಿಸಿದ್ದಾರೆ. ಮತ್ತೊಂದೆಡೆ ರೈತರ ಮಹಾಪಂಚಾಯತ್ ಹಿನ್ನೆಲೆ ದೆಹಲಿ ಸಂಚಾರಿ ಪೊಲೀಸರು ಕೆಲವೆಡೆ ಸಂಚಾರ ಮಾರ್ಗ ಬದಲಾಯಿಸಿದ್ದಾರೆ.
ನಾವು 5000 ಜನರು ಮಾತ್ರ ಪಾಲ್ಗೊಳ್ಳುವಂತೆ ಸೂಚಿಸಿದ್ದೇವೆ. ಆದರೆ, 15 ಸಾವಿರ ಜನರು ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೇಶದ ವಿವಿಧ ಭಾಗಗಳಿಂದ ಸುಮಾರು 30 ಸಾವಿರ ರೈತರು ಮಹಾಪಂಚಾಯತ್‌ನಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಎಸ್‌ಕೆಎಂ ತಿಳಿಸಿದೆ. ಫೆಬ್ರವರಿ 22ರಂದು ಚಂಢೀಗಡದಲ್ಲಿ ಸಭೆ ನಡೆಸಿದ್ದ ಎಸ್‌ಕೆಎಂ, ಇಂದು ಮಹಾಪಂಚಾಯತ್ ನಡೆಸುವ ಬಗ್ಗೆ ಘೋಷಿಸಿತ್ತು. ಪೊಲೀಸರು ಮಾರ್ಚ್ 11ರಂದು ಅನುಮತಿ ನೀಡಿದ್ದರು. ಎಸ್‌ಕೆಎಂ 37 ರೈತ ಸಂಘಟನೆಗಳ ಮಹಾ ಒಕ್ಕೂಟವಾಗಿದೆ.
ವರದಿಗಳ ಪ್ರಕಾರ, ಮೋದಿ ಸರ್ಕಾರದ ಕಾರ್ಪೊರೇಟ್ ಪರ, ಕೋಮುವಾದಿ, ಸರ್ವಾಧಿಕಾರಿ ನೀತಿಗಳ ವಿರುದ್ಧ ಹೋರಾಟವನ್ನು ತೀವ್ರಗೊಳಿಸಲು, ಕೃಷಿ, ಆಹಾರ ಭದ್ರತೆಯನ್ನು ಉಳಿಸಲು ಹೋರಾಡಲು, ಜೀವನೋಪಾಯ ಮತ್ತು ಕಾರ್ಪೊರೇಟ್ ಲೂಟಿಯಿಂದ ಜನರನ್ನು ರಕ್ಷಿಸಲು ಮಹಾಪಂಚಾಯತ್‌ನಲ್ಲಿ ರೈತರು ಸಂಕಲ್ಪ ಪತ್ರ’ ಅಥವಾ ‘ನಿರ್ಣಯದ ಪತ್ರ’ವನ್ನು ಬಿಡುಗಡೆ ಮಾಡಲಿದ್ದಾರೆ.
– ಅಂತರ್ಜಾಲ ಮಾಹಿತಿ
Farmers from Punjab are set to hold a Mahapanchayat at Ramlila Maidan in Delhi on Thursday. On the call of Samyukt Kisan Morcha, farmers said they would hold a foot march from Uchana to Jind before the Mahapanchayat, and would work to show strength to the government.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…