ಮತ್ತಷ್ಟು ತೀವ್ರಗೊಂಡ ರೈತರ ʻದೆಹಲಿ ಚಲೋʼ ಹೋರಾಟ | ಇಂದು ರಾಷ್ಟ್ರ ರಾಜಧಾನಿ ತಲುಪಲಿರುವ ಬಹುತೇಕ ರೈತರು |

March 6, 2024
3:29 PM

ಕೇಂದ್ರ ಸರ್ಕಾರದ(Central Govt) ವಿರುದ್ಧ ವಿವಿಧ ಬೇಡಿಕೆಗಳನ್ನು ಇಟ್ಟುಕೊಂಡು ದೆಹಲಿ ಚಲೋ(‘Delhi Chalo’) ಹಮ್ಮಿಕೊಂಡಿರುವ ರೈತರು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ರೈತರು(Farmer), ಇಂದು(ಮಾ.6) ತಮ್ಮ ಪಾದಯಾತ್ರೆಯನ್ನು(March) ಪುನರಾರಂಭಿಸಲಿದ್ದಾರೆ. ಈ ಹಿನ್ನೆಲೆ ಪಂಜಾಬ್-ಹರಿಯಾಣ(Panjab-Haruyana) ಗಡಿಯಲ್ಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ‘ದೆಹಲಿ ಚಲೋ’ ಹೋರಾಟದ ನೇತೃತ್ವ ವಹಿಸಿರುವ ಎರಡು ಸಂಘಟನೆಗಳಾದ ಕಿಸಾನ್ ಮಜ್ದೂರ್ ಮೋರ್ಚಾ ಮತ್ತು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ದೇಶದಾದ್ಯಂತ ರೈತರಿಗೆ ಇಂದು ರಾಷ್ಟ್ರ ರಾಜಧಾನಿ ದೆಹಲಿ ತಲುಪಲು ಮಾರ್ಚ್‌ 3ರಂದು ಮನವಿ ಮಾಡಿತ್ತು.

Advertisement
Advertisement
Advertisement
Advertisement

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನು ಖಾತರಿ ನೀಡುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಂದಿನ ವಾರ ದೇಶದಾದ್ಯಂತ ನಾಲ್ಕು ಗಂಟೆಗಳ ಕಾಲ “ರೈಲು ತಡೆದು ಪ್ರತಿಭಟಿಸಲು” ರೈತ ಸಂಘಟನೆಗಳು ಕರೆ ನೀಡಿವೆ. ಫೆ.13ರಂದು ದೆಹಲಿ ಚಲೋ ಪ್ರಾರಂಭಿಸಿರುವ ರೈತರನ್ನು ಪಂಜಾಬ್‌-ಹರಿಯಾಣ ರಾಜ್ಯಗಳ ನಡುವಿನ ಶಂಭು ಮತ್ತು ಖನೌರಿ ಗಡಿಯಲ್ಲಿ ಹರಿಯಾಣದ ಬಿಜೆಪಿ ಸರ್ಕಾರದ ಪೊಲೀಸರು ತಡೆದಿದ್ದಾರೆ. ಹರಿಯಾಣ ಪೊಲೀಸರು ರೈತರು ದೆಹಲಿ ಕಡೆ ತೆರಳಲು ಅವಕಾಶ ನೀಡುತ್ತಿಲ್ಲ. ಹಾಗಾಗಿ, ಪಂಜಾಬ್ ಮತ್ತು ಹರಿಯಾಣದ ರೈತರು ಶಂಭು, ಖನೌರಿ ಗಡಿಗಳಲ್ಲಿ ಪ್ರತಿಭಟನೆ ಮುಂದುವರೆಸಿದರೆ, ಇತರ ರಾಜ್ಯಗಳ ರೈತರು ದೆಹಲಿ ತಲುಪುವಂತೆ ರೈತ ನಾಯಕರು ಕರೆ ನೀಡಿದ್ದಾರೆ.

Advertisement

ರೈತರಿಂದ ರೈಲು ತಡೆ : ಹೋರಾಟ ತೀವ್ರಗೊಳಿಸಲು ಮುಂದಾಗಿರುವ ರೈತ ಮುಖಂಡರು, ಮಾರ್ಚ್‌ 1ರಂದು ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ದೇಶದಾದ್ಯಂತ ರೈಲು ತಡೆದು ಪ್ರತಿಭಟನೆ ನಡೆಸಲು ರೈತರು ಮತ್ತು ಕಾರ್ಮಿಕರಿಗೆ ಸೂಚಿಸಿದ್ದಾರೆ. ಈ ನಡುವೆ 2020-21ರ ರೈತರ ಆಂದೋಲನದ ನೇತೃತ್ವ ವಹಿಸಿದ್ದ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಮಾರ್ಚ್ 14 ರಂದು ದೆಹಲಿಯಲ್ಲಿ ‘ರೈತ ಮಹಾ ಪಂಚಾಯತ್’ ಘೋಷಿಸಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು 400ಕ್ಕೂ ಹೆಚ್ಚು ರೈತರ ಸಂಘಟನೆಗಳು ‘ರೈತ ಮಹಾ ಪಂಚಾಯತ್‌’ನಲ್ಲಿ ಭಾಗವಹಿಸಲಿವೆ ಎಂದು ಎಸ್‌ಕೆಎಂ ತಿಳಿಸಿದೆ.

ಅಲರ್ಟ್‌ ಆದ ದೆಹಲಿ ಪೊಲೀಸರು : ರೈತರ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ಟಿಕ್ರಿ, ಸಿಂಘು ಮತ್ತು ಘಾಜಿಪುರ ಗಡಿಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ದೆಹಲಿ ಪೊಲೀಸ್‌ ಮುಖ್ಯಸ್ಥರು ತಮ್ಮ ಸಿಬ್ಬಂದಿಗೆ ಸೂಚಿಸಿದ್ದಾರೆ. ರೈಲ್ವೆ ಮತ್ತು ಬಸ್‌ ನಿಲ್ದಾಣಗಳಲ್ಲಿ ಹೆಚ್ಚುವರಿ ಪೊಲೀಸ್ ಮತ್ತು ಅರೆಸೇನಾ ಪಡೆಗಳನ್ನು ಸಹ ನಿಯೋಜಿಸಲಾಗಿದೆ. ವಿವಿಧೆಡೆ ತಪಾಸಣೆ ತೀವ್ರಗೊಳಿಸಲಾಗಿದ್ದು, ರಾಜಧಾನಿಯಲ್ಲಿ ಸಂಚಾರ ದಟ್ಟಣೆ ಉಂಟಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

Advertisement
  • ಅಂತರ್ಜಾಲ ಮಾಹಿತಿ

Today is the 23rd day of the protest launched by KMM & SKM (non-political). An announcement was made earlier that farmers from other states will start marching towards Delhi from today but farmers coming from far-off places will not be able to reach Delhi today.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror