ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸ್ಪಷ್ಟಪಡಿಸಿದ್ದಾರೆ.
ದೆಹಲಿಯಲ್ಲಿ ರೈತರೊಂದಿಗೆ ಸಂವಾದ ನಡೆಸಿದ ಬಳಿಕ ಅವರು, ಭಾರತ ಇತರ ದೇಶಗಳೊಂದಿಗೆ ಸ್ನೇಹ ಸಂಬಂಧ ಕಾಪಾಡಿಕೊಂಡು ನ್ಯಾಯ ಸಮ್ಮತ ವಾಣಿಜ್ಯ ಒಪ್ಪಂದಗಳಿಗೆ ಇಚ್ಚಿಸುತ್ತದೆ. ಈ ಒಪ್ಪಂದಗಳು ಪ್ರಧಾನಿ ನರೇಂದ್ರ ಮೋದಿ ಅವರು ಸ್ವದೇಶಿ ಮಂತ್ರದ ಕರೆ ನೀಡಿದ್ದಾರೆ. ಅದರಂತೆ ರೈತರು ದೇಶದಲ್ಲೇ ತಯಾರಿಸಿದ ಉತ್ಪನ್ನಗಳನ್ನು ಬಳಸಲು ಸಂಕಲ್ಪ ಮಾಡಿದ್ದಾರೆ. ಸರ್ಕಾರಕ್ಕೆ ರಾಷ್ಟ್ರೀಯ ಹಿತಾಸಕ್ತಿಯೆ ಅತಿಮುಖ್ಯವಾಗಿದೆ. ಪ್ರಧಾನಿ ಅವರು ಇಂದು ತಮ್ಮ ಭಾಷಣದಲ್ಲಿ ದೇಶಭಕ್ತಿಯ ಸ್ಫೂರ್ತಿ ತುಂಬಿದ್ದು, ಹೊಸ ಹಾದಿ ತೋರಿದ್ದಾರೆ ಎಂದರು. ಕೊನೆಯ ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ವೇಳೆ ಎದುರಾಗುವ ಅಡೆತಡೆಗಳನ್ನು ನಿವಾರಿಸಲು ವಿಜ್ಞಾನಿಗಳ ತಂಡವೊಂದನ್ನು ರಚಿಸಲಾಗುವುದು. ಹಿಂಗಾರು ಬೆಳೆ ಹಂಗಾಮಿಗೆ ಕೃಷಿ ಇಲಾಖೆ ಈಗಿನಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಮುಂದಿನ ತಿಂಗಳ 15-16ರಂದು ದೆಹಲಿಯಲ್ಲಿ ಹಿಂಗಾರು ಸಮಾವೇಶ ನಡೆಯಲಿದ್ದು, ಇದರಲ್ಲಿ ರಾಜ್ಯಗಳ ಕೃಷಿ ಸಚಿವರು, ತಜ್ಞರು, ಕೃಷಿ ವಿಜ್ಞಾನಿಗಳು ಮತ್ತು ಎಲ್ಲ ರಾಜ್ಯಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…