ಜಿಲ್ಲೆಯಾದ್ಯಂತ ಮಂಗಳವಾರ ಸಂಜೆ ಗುಡುಗು ಸಹಿತ ಮಳೆಯಾಗಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಇಬ್ಬರು ರೈತರು ಸಾವನ್ನಪ್ಪಿದ ಘಟನೆಯೊಂದು ಸಂಡೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬೊಮ್ಮಲಗುಂಡ ಗ್ರಾಮದ ನಾಗಪ್ಪ (70) ಹಾಗೂ ನಾಗೇನಹಳ್ಳಿಯ ಜಾಜರ್ ಕಲ್ಲು ತಿಮ್ಮಣ್ಣ (70) ಮೃತರು. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದಿದ್ದು, ಈ ವೇಳೆ ನಾಗಪ್ಪ ಅವರ ಮೇಕೆಯೂ ಸಿಡಿಲಿಗೆ ಬಲಿಯಾಗಿದೆ ಎಂದು ತಿಳಿದು ಬಂದಿದೆ.
ಮಂಗಳವಾರ ಸಂಜೆ ಸಂಡೂರು ಪಟ್ಟಣ ಹಾಗೂ ಚೋರನೂರು ಹೋಬಳಿಯಲ್ಲಿ ಉತ್ತಮ ಮಳೆಯಾಗಿದೆ. ಕೃಷಿ ಹಾನಿಯ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಳ್ಳಾರಿ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿ, ಹಳ್ಳ-ಕೊಳಗಳು ತುಂಬಿ ಹರಿಯುತ್ತಿದ್ದು, ಮನೆ ಹಾಗೂ ಜಮೀನುಗಳಿಗೆ ನೀರು ನುಗ್ಗಿದೆ. ಮನೆಯಲ್ಲಿನ ನೀರನ್ನು ಹೊರಹಾಕಲು ರೂಪನಗುಡಿ ರಸ್ತೆ, ವಡ್ಡರಬಂಡೆ, ಬಳ್ಳಾರಪ್ಪ ಕಾಲೋನಿಯ ಜನ ಹರಸಾಹಸ ಪಡುತ್ತಿದ್ದಾರೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…