Advertisement
MIRROR FOCUS

ಅತಿವೃಷ್ಟಿಯಿಂದ ಕಲ್ಯಾಣ ಕರ್ನಾಟಕದ ರೈತರು ಸಂಕಷ್ಟ | ಸಂತ್ರಸ್ತರ ನೆರವಿಗೆ 500 ಕೋಟಿ ರೂಪಾಯಿ ಬಿಡುಗಡೆಗೆ ಒತ್ತಾಯ

Share

ಕಲ್ಯಾಣ ಕರ್ನಾಟಕದಲ್ಲಿ ಅತಿವೃಷ್ಟಿಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಪರಿಹಾರದ ರೂಪದಲ್ಲಿ ಸಂತ್ರಸ್ತರ ನೆರವಿಗಾಗಿ 500 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿದ ಅವರು ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದಾಗಿ ರೈತರ ಬೆಳೆಗಳಿಗೆ ಸಂಪೂರ್ಣವಾಗಿ ಹಾನಿಯಾಗಿದೆ. ರಾಜ್ಯ ಸರ್ಕಾರ ಪ್ರತಿ ಹೆಕ್ಟೇರ್ ಗೆ NDRF ಮಾರ್ಗಸೂಚಿ ಅನ್ವಯ ನೀಡುವ ಪರಿಹಾರದ ಜೊತೆಗೆ ಹೆಚ್ಚುವರಿಯಾಗಿ ಎಂಟೂವರೆ ಸಾವಿರ ರೂಪಾಯಿ ನೀಡುವುದಾಗಿ ಹೇಳಿದ್ದು, ಈ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.  ಬೆಳೆ ಕಳೆದುಕೊಂಡ ರೈತರ ಸಾಲವನ್ನು ಒತ್ತಾಯದಿಂದ ವಸೂಲಿ ಮಾಡಬಾರದು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಬೇಕು. ಇದರ ಜೊತೆಗೆ ರಾಜ್ಯ ಸರ್ಕಾರ ಪ್ರವಾಹದಿಂದ ಆಗಿರುವ ಹಾನಿಯ ಕುರಿತು ವರದಿ ಸಿದ್ಧಪಡಿಸಿ ಕೇಂದ್ರದ ನೆರವಿಗಾಗಿ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸಲಹೆ ನೀಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

1 day ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

1 day ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

1 day ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 days ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 days ago