ರೈತರ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಮೊದಲ ಆದ್ಯತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ರೈತರ ಮುಖಂಡರ ಜೊತೆ ಆಯ-ವ್ಯಯ ಕುರಿತ ಪೂರ್ವಭಾವಿ ಸಭೆಯಲ್ಲಿ ಈ ಭರವಸೆ ನೀಡಿದ್ದಾರೆ. ಕೃಷಿಯಲ್ಲಿ ಅತಿ ಹೆಚ್ಚು ಉದ್ಯೋಗ ಅವಲಂಬನೆ ಇರುವುದರಿಂದ, ರೈತರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಹೇಳಿದ್ದಾರೆ. ಇದೇ ವೇಳೆ, ವಿವಿಧ ಬೇಡಿಕೆ ಈಡೇರಿಸುವಂತೆ ರೈತ ಸಂಘ, ಸರ್ಕಾರಕ್ಕೆ ಮನವಿ ಸಲ್ಲಿಸಿತು. ಇದಕ್ಕೂ ಮೊದಲು ಸುಗ್ರಿವಾಜ್ಞೆ ಮೂಲಕ ಸಣ್ಣ ಹಣಕಾಸು ಸಂಸ್ಥೆಗಳ ಬಲವಂತದ ವಸೂಲಿಗೆ ಕಡಿವಾಣ ಹಾಕಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರೈತ ಮುಖಂಡರು ಅಭಿನಂದಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel