ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಮೂರು ದಿನಗಳ ಜಾನುವಾರು, ಕುಕ್ಕುಟ ಮತ್ತು ಮತ್ಸ್ಯ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಬೀದರ್‌ನಲ್ಲಿ ಚಾಲನೆ ನೀಡಿದರು. ಇದೇ ವೇಳೆ, ಕೈಪಿಡಿ ಬಿಡುಗಡೆ ಮಾಡಿ, ಸಾಧಕರನ್ನು ಸನ್ಮಾನಿಸಿದರು. ಬಳಿಕ ಮಾತನಾಡಿದ ಸಚಿವರು, ಬೀದರ್ ಜಿಲ್ಲೆಯಲ್ಲಿ ಪ್ರತಿನಿತ್ಯ ಒಂದೂವರೆ ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಅದರಲ್ಲಿ 50 ರಿಂದ 60 ಲೀಟರ್ ಹಾಲನ್ನು ಕೆಎಂಎಫ್ ಖರೀದಿ ಮಾಡುತ್ತಿದ್ದು, ಇನ್ನುಳಿದ ಹಾಲಿನಿಂದ ಉಪ ಉತ್ಪನ್ನಗಳ ತಯಾರಿಕೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು. ಬಡ್ಡಿರಹಿತ ಸಾಲ, ಜಾನುವಾರುಗಳಿಗೆ ಲಸಿಕೆ, ಉಚಿತ ಮೇವಿನ ಕಿಟ್‌ಗಳು ಸೇರಿದಂತೆ, ಹಲವು ಸೌಲಭ್ಯಗಳನ್ನು ರೈತರು ನೀಡುತ್ತಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel