ಹಾಲಿಗೆ 10 ರೂಪಾಯಿ ಹೆಚ್ಚಳ ಮಾಡುವಂತೆ ರೈತರಿಂದ ಪ್ರಸ್ತಾವನೆ | ದರ ಹೆಚ್ಚಳ ಮಾಡುವ ಕುರಿತು ಸೂಕ್ತ ನಿರ್ಧಾರ |

March 6, 2025
9:19 PM
ಹಾಲಿನ ದರ ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಹೆಚ್ಚಿದ್ದು, ಪ್ರತಿ ಲೀಟರ್ ಗೆ 10 ರೂಪಾಯಿ ಹೆಚ್ಚಳ ಮಾಡುವಂತೆ ರೈತರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಇದಕ್ಕೆ ಹಾಲು ಉತ್ಪಾದನಾ ಸಹಕಾರ ಸಂಘಗಳು ಕೂಡ ಸಹಮತ ವ್ಯಕ್ತಪಡಿಸಿವೆ.

ರೈತರು ಮತ್ತು ಗ್ರಾಹಕರಿಗೆ ಅನುಕೂಲವಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಆದಷ್ಟು ಶೀಘ್ರ ಹಾಲಿನ ದರ ಹೆಚ್ಚಳ ಮಾಡುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ.

ಹಾಲಿನ ದರ ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಹೆಚ್ಚಿದ್ದು, ಪ್ರತಿ ಲೀಟರ್ ಗೆ 10 ರೂಪಾಯಿ ಹೆಚ್ಚಳ ಮಾಡುವಂತೆ ರೈತರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಇದಕ್ಕೆ ಹಾಲು ಉತ್ಪಾದನಾ ಸಹಕಾರ ಸಂಘಗಳು ಕೂಡ ಸಹಮತ ವ್ಯಕ್ತಪಡಿಸಿವೆ. ಆದರೆ ಅಂತಿಮವಾಗಿ ಗ್ರಾಹಕರು ಮತ್ತು ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ದರ ಹೆಚ್ಚಳದ ಕುರಿತು ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು. ರಾಜ್ಯದಲ್ಲಿ ಹಾಲು ಉತ್ಪಾದನೆ ಪ್ರತಿ ದಿನ ಒಂದು ಕೋಟಿ ಲೀಟರ್ ಗೆ ಏರಿಕೆಯಾಗಿದೆ. ಉತ್ಪಾದನಾ ವೆಚ್ಚವು ಅಧಿಕವಾಗುತ್ತಿದೆ. ಹೀಗಾಗಿ ದರ ಪರಿಷ್ಕರಣೆ ಬಗ್ಗೆ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಬೇಕಿದೆ. ಹಾಲಿನ ಪ್ರೋತ್ಸಾಹಧನ ಹೆಚ್ಚಳದ ಬಗ್ಗೆ ಗಂಭೀರ ಚರ್ಚೆ ನಡೆದಿದೆ. ಉತ್ಪಾದನೆಗೆ ತಕ್ಕಂತೆ ಬಜೆಟ್ ನಲ್ಲಿ ಅನುದಾನ ನಿಗದಿಪಡಿಸುವ ಅಗತ್ಯವಿದೆ. ಹಿಂದೆ ಇದ್ದ ಸರ್ಕಾರ ಕೂಡ ಹಾಲಿನ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
April 13, 2026
7:09 AM
by: ಮಿರರ್‌ ಡೆಸ್ಕ್
ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ
April 13, 2026
7:07 AM
by: ಮಿರರ್‌ ಡೆಸ್ಕ್
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ
April 13, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror