ರೈತರು ಮತ್ತು ಗ್ರಾಹಕರಿಗೆ ಅನುಕೂಲವಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಆದಷ್ಟು ಶೀಘ್ರ ಹಾಲಿನ ದರ ಹೆಚ್ಚಳ ಮಾಡುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ.
ಹಾಲಿನ ದರ ಹೆಚ್ಚಳ ಮಾಡುವಂತೆ ರೈತರಿಂದ ಬೇಡಿಕೆ ಹೆಚ್ಚಿದ್ದು, ಪ್ರತಿ ಲೀಟರ್ ಗೆ 10 ರೂಪಾಯಿ ಹೆಚ್ಚಳ ಮಾಡುವಂತೆ ರೈತರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಇದಕ್ಕೆ ಹಾಲು ಉತ್ಪಾದನಾ ಸಹಕಾರ ಸಂಘಗಳು ಕೂಡ ಸಹಮತ ವ್ಯಕ್ತಪಡಿಸಿವೆ. ಆದರೆ ಅಂತಿಮವಾಗಿ ಗ್ರಾಹಕರು ಮತ್ತು ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ದರ ಹೆಚ್ಚಳದ ಕುರಿತು ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು. ರಾಜ್ಯದಲ್ಲಿ ಹಾಲು ಉತ್ಪಾದನೆ ಪ್ರತಿ ದಿನ ಒಂದು ಕೋಟಿ ಲೀಟರ್ ಗೆ ಏರಿಕೆಯಾಗಿದೆ. ಉತ್ಪಾದನಾ ವೆಚ್ಚವು ಅಧಿಕವಾಗುತ್ತಿದೆ. ಹೀಗಾಗಿ ದರ ಪರಿಷ್ಕರಣೆ ಬಗ್ಗೆ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಬೇಕಿದೆ. ಹಾಲಿನ ಪ್ರೋತ್ಸಾಹಧನ ಹೆಚ್ಚಳದ ಬಗ್ಗೆ ಗಂಭೀರ ಚರ್ಚೆ ನಡೆದಿದೆ. ಉತ್ಪಾದನೆಗೆ ತಕ್ಕಂತೆ ಬಜೆಟ್ ನಲ್ಲಿ ಅನುದಾನ ನಿಗದಿಪಡಿಸುವ ಅಗತ್ಯವಿದೆ. ಹಿಂದೆ ಇದ್ದ ಸರ್ಕಾರ ಕೂಡ ಹಾಲಿನ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿತ್ತು.
ಅಕ್ರಮವಾಗಿ ಸುಮಾರು 68 ಟನ್ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…
ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…
ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…