Advertisement
MIRROR FOCUS

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

Share

ರೈತರನ್ನು ಕೇವಲ ಉತ್ಪಾದಕರಾಗಿ ಮಾತ್ರವಲ್ಲದೆ ಉದ್ಯಮಿಗಳನ್ನಾಗಿ ರೂಪಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.

ಮಂಡ್ಯ ನಗರದಲ್ಲಿ ವಿವಿಧ ಇಲಾಖೆಗಳ ವತಿಯಿಂದ ಆಯೋಜಿಸಲಾದ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ರೈತರಿಗೆ ಬೆಳೆ ಮೌಲ್ಯವರ್ಧನೆ, ಸಂಸ್ಕರಣೆ ಮತ್ತು ಮಾರುಕಟ್ಟೆ ಸಂಪರ್ಕ ಕಲ್ಪಿಸುವ ವ್ಯವಸ್ಥೆಗಳನ್ನು ಸರ್ಕಾರ ರೂಪಿಸುತ್ತಿದ್ದು, ಇದರ ಮೂಲಕ ಕೃಷಿಯನ್ನು ಲಾಭದಾಯಕ ವೃತ್ತಿಯನ್ನಾಗಿ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.

ಮಂಡ್ಯ ಜಿಲ್ಲೆ ಕೃಷಿ ಪ್ರಧಾನವಾದ ಜಿಲ್ಲೆಯಾಗಿದ್ದು, ಜಿಲ್ಲೆಯ ಕೃಷಿ ಕ್ಷೇತ್ರಕ್ಕೆ ಇನ್ನಷ್ಟು ಬಲ ನೀಡುವ ಉದ್ದೇಶದಿಂದ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗೆ ಸರ್ಕಾರ ಹೆಚ್ಚಿನ ಮಹತ್ವ ನೀಡುತ್ತಿದೆ ಎಂದು ಅವರು ತಿಳಿಸಿದರು.

ಕೃಷಿಯಲ್ಲಿ ತಂತ್ರಜ್ಞಾನ ಬಳಕೆ, ಮೌಲ್ಯವರ್ಧನೆ ಹಾಗೂ ಉತ್ತಮ ಮಾರುಕಟ್ಟೆ ವ್ಯವಸ್ಥೆಗಳ ಮೂಲಕ ರೈತರ ಆದಾಯವನ್ನು ಹೆಚ್ಚಿಸುವತ್ತ ಸರ್ಕಾರ ಗಮನ ಹರಿಸಿದೆ ಎಂದು ಸಚಿವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Karnataka Agriculture Minister N. Chaluvarayaswamy said the government’s goal is to transform farmers into agri-entrepreneurs by promoting value addition and market linkages. He also stated that the government is giving priority to establishing an agricultural university in Mandya district to strengthen the agricultural sector.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

19 minutes ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

10 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

1 day ago