ನಾವು ಓಟು(Vote) ಹಾಕಿ ನಾಯಕ ಪಟ್ಟ ನೀಡಿದ ನಾಯಕರು(Leaders) ಎಂದೂ ರೈತರಿಗೆ ಉಲ್ಟಾನೇ ಹೊಡಿಯೋದು. ಬಹುತೇಕ ರಾಜಕಾರಣಿಗಳು(Politicians) ರೈತರ(Farmer) ಪರ ಯೋಚನೆಗಳನ್ನು ಮಾಡುವುದೇ ಇಲ್ಲ. ಇತ್ತೀಚೆಗಷ್ಟೆ ರೈತರಿಗೆ ಪರಿಹಾರ ನೀಡಿದ ಬಳಿಕ ರೈತರ ಆತ್ಮಹತ್ಯೆ(Farmer suicide)ಸಂಖ್ಯೆಗಳು ಹೆಚ್ಚಾಗುತ್ತಿವೆ ಎಂದು ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ (Shivanand Patil) ಮತ್ತೊಮ್ಮೆ ರೈತರ ಬಗ್ಗೆ ಲಘುವಾಗಿ ಮಾತನಾಡಿ ವಿವಾದ ಸೃಷ್ಟಿಸಿದ್ದಾರೆ. ಇದೀಗ ನನಗೆ ಮದ ಏರಿಲ್ಲ, ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ರೈತರು ಬರಗಾಲ ಬರಲಿ ಎಂದು ಆಶಿಸುತ್ತಾರೆ ಎಂಬ ತಮ್ಮ ಹೇಳಿಕೆ ಕುರಿತು ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಲೋಕಸಭಾ ಚುನಾವಣೆ (Loksabha Election) ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ಹೇಳುವ ಮೂಲಕ ಸಚಿವರು ಪರೋಕ್ಷವಾಗಿ ತಮ್ಮ ಹೇಳಿಕೆ ಸಮರ್ಥಿಸಿಕೊಂಡರು. ನಾನು ರೈತರ ವಿರೋಧಿ ಅಲ್ಲ, ರೈತರ ವಿರೋಧವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಮೂರು ವರ್ಷಕ್ಕೊಮೆ ರೈತರ ಬೆಳೆಗಳಿಗೆ ಬೆಲೆ ಬರುತ್ತದೆ. ಉಳಿದ ಎರಡು ಬೆಲೆ ಇಲ್ಲದೆ ಕಂಗಾಲಾಗಿರುತ್ತಾರೆ. ಹಾಗಾಗಿ ರೈತರು ಸಾಲಮನ್ನಾ ಆಗಲಿ ಎಂದು ಆಶಯ ವ್ಯಕ್ತಪಡಿಸುತ್ತಾರೆ ಎಂದಿದ್ದೇನೆ ಅಂದರು.
ಕೃಷ್ಣಾ ನದಿ ನೀರು ಪುಕ್ಕಟೆ ಆಗಿದೆ. ಕರೆಂಟ್ ಪುಕ್ಕಟೆ ಸಿಗುತ್ತಿದೆ. ಬಹಳಷ್ಟ ಮುಖ್ಯಮಂತ್ರಿಗಳು ಬೆಳೆ ಬೆಳೆಯಲು ಬೀಜನೂ ಕೊಟ್ಟರು, ಗೊಬ್ಬರನೂ ಕೊಟ್ಟರು. ಇನ್ನೂ ರೈತರಿಗೆ ಏನಪ್ಪಾ ಅಂದ್ರೆ ಒಂದು ಆಸೆ ಇರುತ್ತೆ, ಮಗನ್ ಮ್ಯಾಲ ಮ್ಯಾಲ ಬರಗಾಲ ಬೀಳಲಿ ಅಂತ ಹೇಳಿ. ಯಾಕಂದ್ರೆ ಸಾಲ ಮನ್ನಾ ಆಗುತ್ತೆ ಅಂತಾ. ಈ ರೀತಿಯಾಗಿ ಬಯಸಬಾರದು ಎಂದು ಹೇಳಿದ್ದಾರೆ. ಹಿಂದಿನ ಸರ್ಕಾರಗಳು ಸಾಲ ಮನ್ನಾ ಮಾಡಿವೆ. ಆದ್ರೆ ಸರ್ಕಾರ ಸಂಕಷ್ಟದಲ್ಲಿದ್ದಾಗ ಅದು ಕಷ್ಟ ಸಾಧ್ಯ. ಸರ್ಕಾರ ಸದಾ ನರೆವಿಗೆ ಬರಲು ಸಾಧ್ಯವಿಲ್ಲ ಎಂದು ಸಚಿವರು ಮಾತನಾಡಿದ್ದಾರೆ.
ಇತ್ತೀಚೆಗೆ ಕೇಂದ್ರದ ಯೋಜನೆಗಳು ರೈತರಿಗೆ ಮುಳುವಾಗಿವೆ. ನನಗೆ ಮದ ಏರಿದೆ ಎಂದು ವಿರೋಧ ಪಕ್ಷದವರು ಹೇಳುತ್ತಾರೆ. ಆದರೆ ಇದೆಲ್ಲ ರಾಜಕೀಯ ಗಿಮಿಕ್ ಮಾಡುತ್ತಿದ್ದಾರೆ ಎಂದು ಸಚಿವರು ಆರೋಪಿಸಿದರು. ಅಲ್ಲದೆ ಬಿಜೆಪಿ ನಾಯಕರಿಗೆ ರೈತರ ಮೇಲೆ ಕರುಣೆ ಇದ್ದರೆ ಕೇಂದ್ರ ಸರ್ಕಾರದ ನೀತಿಗಳನ್ನು ಬದಲಾಯಿಸಲಿ. ವಿರೋಧ ಪಕ್ಷದ ನಾಯಕರು ರೈತರ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿ ಗಮನಕ್ಕೆ ತರಲಿ ಎಂದು ಇದೇ ವೇಳೆ ಶಿವಾನಂದ್ ಪಾಟೀಲ್ ಒತ್ತಾಯಿಸಿದರು
ಸಚಿವರು ಹೇಳಿದ್ದೇನು..?: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಸ್ವ ಸಹಾಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತಾನಾಡಿರುವ ಸಚಿವರು, ಸಾಲ ಮನ್ನಾದ ಆಸೆಗಾಗಿ ಬರಗಾಲ ಬರಲೆಂದು ರೈತರು ಕಾಯುತ್ತಾರೆ ಎಂದು ಹೇಳಿದ್ದಾರೆ. ಕೃಷ್ಣಾ ನದಿ ನೀರು ಪುಕ್ಕಟೆ ಆಗಿದೆ. ಕರೆಂಟ್ ಪುಕ್ಕಟೆ ಸಿಗುತ್ತಿದೆ. ಬಹಳಷ್ಟ ಮುಖ್ಯಮಂತ್ರಿಗಳು ಬೆಳೆ ಬೆಳೆಯಲು ಬೀಜನೂ ಕೊಟ್ಟರು, ಗೊಬ್ಬರನೂ ಕೊಟ್ಟರು. ಇನ್ನೂ ರೈತರಿಗೆ ಏನಪ್ಪಾ ಅಂದ್ರೆ ಒಂದು ಆಸೆ ಇರುತ್ತೆ, ಮಗನ್ ಮ್ಯಾಲ ಮ್ಯಾಲ ಬರಗಾಲ ಬೀಳಲಿ ಅಂತ ಹೇಳಿ. ಯಾಕಂದ್ರೆ ಸಾಲ ಮನ್ನಾ ಆಗುತ್ತೆ ಅಂತಾ. ಈ ರೀತಿಯಾಗಿ ಬಯಸಬಾರದು ಎಂದು ಹೇಳಿದ್ದರು.
Sugar Minister Shivanand Patil, who made a controversial statement about farmers saying that the number of farmer suicides is increasing after giving compensation to farmers, has once again created controversy by talking lightly about farmers. Sugar Minister Shivanand Patil has clarified his statement that farmers are hoping for a drought and that my statement has been distorted.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…