ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಹಿಂಗಾರು ಬೆಳೆಗೆ ನೀರಿನ ಕೊರತೆ ಆಗುವುದಿಲ್ಲ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಮಾತನಾಡಿದ ಅವರು, ಮಾರ್ಚ್ ಮೊದಲ ವಾರದವರೆಗೆ ಜಲಾಶಯದಲ್ಲಿ ನೀರಿನ ಲಭ್ಯತೆ ಇದ್ದು, ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ರೈತರು ನೀರನ್ನು ಸದ್ಭಳಕೆ ಮಾಡಿಕೊಂಡು ಹಿಂಗಾರು ಬೆಳೆಗಳ ಅಗತ್ಯತೆ ಅನುಸಾರ ನೀರು ಪಡೆದುಕೊಳ್ಳಬೇಕು. ನೀರು ಪೋಲಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel