ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ ಜಿಲ್ಲೆಗಳ ಪಟ್ಟಿಯಲ್ಲಿ ರಾಜ್ಯದ ಕಲಬುರಗಿ ಹಾಗೂ ಗದಗ ಜಿಲ್ಲೆಗಳು ಮೊದಲ ಸ್ಥಾನದಲ್ಲಿವೆ. ಕಳೆದ ವರ್ಷ ಹಂಗಾಮಿ ಮುಂಗಾರಿನಿಂದ ಉಂಟಾದ ಬೆಳೆ ಹಾನಿಯಿಂದ ಇಲ್ಲಿನ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ತೊಗರಿ,ಹತ್ತಿ,ಭತ್ತ,ರಾಗಿ, ಮೆಕ್ಕೆಜೋಳ, ಸೋಯಾಬಿನ್, ನೆಲಗಡಲೆ ಸೇರಿದಂತೆ ವಿವಿಧ ಬೆಳೆಗಳಿಗೆ ಬೆಳೆವಿಮೆ ಮಾಡಿಸಿದ ಫಲವಾಗಿ ಇದೀಗ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಫಸಲ್ ಭೀಮಾ ಯೋಜನೆಯಡಿ ರಾಜ್ಯಕ್ಕೆ 14ಸಾವಿರದ 48 ಕೋಟಿ ಹಣ ಬಿಡುಗಡೆಯಾಗಿದ್ದು, ಈ ಭಾಗದ ರೈತರು ಯೋಜನೆಯ ಹೆಚ್ಚು ಫಲಾನುಭವಿಗಳಾಗಿದ್ದಾರೆ.
2ಲಕ್ಷದ 18ಸಾವಿರದ 868 ರೈತರ, 2ಕೋಟಿ 57ಲಕ್ಷದ 962 ಹೆಕ್ಟೇರ್ ಭೂಮಿ ಫಸಲ್ ಭೀಮಾ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿದ್ದು, 68 ಕೋಟಿ 57 ಲಕ್ಷ ಹಣ ಜಿಲ್ಲೆಗೆ ಬಿಡುಗಡೆಯಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಸಮದ್ ಪಟೇಲ್ ಹೇಳಿದ್ದಾರೆ. ಅತಿವೃಷ್ಠಿ ಹಾಗೂ ಅನಾವೃಷ್ಟಿ ಎರಡರಿಂದಲೂ ನಮ್ಮ ಭಾಗದ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ವಿಮಾ ಯೋಜನೆ ಮಾಡಿಸುವುದರ ಫಲವಾಗಿ ಭಿತ್ತನೆಯಿಂದ ಕಟಾವಿನವರೆಗೂ ಬೆಳೆವಿಮೆ ದೊರೆಯಲಿದೆ ಎಂದು ಹೇಳುತ್ತಾರೆ ರೈತ ವಿಶ್ವನಾಥ್ ಪೂಜಾರಿ.
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…
ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…