ಕಬ್ಬು ಬೆಳೆಗಾರರ ಸಮಸ್ಯೆ | ಆಮರಣಾಂತ ಉಪವಾಸ ಸತ್ಯಾಗ್ರಹ | 104 ದಿನಗಳಿಂದ ರೈತರ ಅಹೋರಾತ್ರಿ ಧರಣಿ | ರೈತರ ಆರೋಗ್ಯದಲ್ಲಿ ಏರುಪೇರು |

February 18, 2023
12:44 PM

ಕಬ್ಬಿಗೆ ವೈಜ್ಞಾನಿಕ ಬೆಲೆ ಹಾಗೂ ಹಾಲಿನ ದರ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಕ್ಕರೆನಾಡು ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ 104 ದಿನಗಳಿಂದ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ರೈತರ ಬಗ್ಗೆ ತಲೆಕೆಡಿಸಿಕೊಳ್ಳದ ಕಾರಣ ರೈತರು  ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಈ ಮಧ್ಯೆ ಆಮರಣಾಂತ ಉಪವಾಸ ಸತ್ಯಾಗ್ರಹವನ್ನೂ ರೈತರು ಆರಂಭಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಉಪವಾಸ ಕುಳಿತ ರೈತರ ಆರೋಗ್ಯದಲ್ಲಿ ಏರುಪೇರಾಗಿ ಓರ್ವ ರೈತ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement

ಐವರು ರೈತರಿಂದ ಕಳೆದ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಯುತ್ತಿದ್ದು, ರಾಮಕೃಷ್ಣ ಎಂಬ ರೈತನನ್ನು ಆರೋಗ್ಯ ಸಿಬ್ಬಂದಿ ಹಾಗೂ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇನ್ನು ನಾಲ್ವರು ರೈತರ ಆರೋಗ್ಯದಲ್ಲಿಯೂ ಏರುಪೇರಾಗಿದೆ. ಉಪವಾಸ ನಿರತ ರೈತರ ಆರೋಗ್ಯ ತಪಾಸಣೆಯನ್ನು ಡಿಹೆಚ್ಓ ಡಾ.ಧನಂಜಯ್ ನೇತ್ವತದ ವೈದ್ಯರ ತಂಡ ಮಾಡುತ್ತಿದೆ.

ಉಪವಾಸ ನಿರತ ರೈತರಿಗೆ ಚಿಕಿತ್ಸೆ ಅಗತ್ಯವಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡುವಂತೆ ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ವೈದ್ಯರ ಸೂಚನೆ ಮೇರೆಗೆ ರೈತರ ಮನವೊಲಿಕೆಗೆ ಪೊಲೀಸರು ಪ್ರಯತ್ನಿಸಿದರು. ಚಿಕಿತ್ಸೆ ಅಗತ್ಯವಿದ್ದು, ಉಪವಾಸ ಕೈ ಬಿಡಿ ಎಂದು ರೈತರಲ್ಲಿ ಮನವಿ ಮಾಡಿದರು. ಪೊಲೀಸರ ಮನವಿಗೂ ಕ್ಯಾರೇ ಎನ್ನದೆ ಅಧಿಕಾರಿಗಳ ವಿರುದ್ಧ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 09-07-2025 | ಇಂದು ಸಾಮಾನ್ಯ ಮಳೆ | ಜುಲೈ 16 ರಿಂದ ಮುಂಗಾರು ದುರ್ಬಲಗೊಳ್ಳಬಹುದಾ ? |
July 9, 2025
1:47 PM
by: ಸಾಯಿಶೇಖರ್ ಕರಿಕಳ
ಜೋಯಿಡಾದ ಗ್ರಾಮದಲ್ಲಿ ಸೇತುವೆ ಕುಸಿತ | ತಾತ್ಕಾಲಿಕ ಕಾಲು ಸಂಕ ನಿರ್ಮಾಣ |
July 9, 2025
10:57 AM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶಿಖರ್ ಬಿ.ಕೆ.
July 9, 2025
7:44 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕ್ರಿಶನ್ ಎಸ್ ಭಟ್
July 9, 2025
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group