ಕಬ್ಬಿಗೆ ವೈಜ್ಞಾನಿಕ ಬೆಲೆ ಹಾಗೂ ಹಾಲಿನ ದರ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಕ್ಕರೆನಾಡು ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ 104 ದಿನಗಳಿಂದ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ರೈತರ ಬಗ್ಗೆ ತಲೆಕೆಡಿಸಿಕೊಳ್ಳದ ಕಾರಣ ರೈತರು ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಈ ಮಧ್ಯೆ ಆಮರಣಾಂತ ಉಪವಾಸ ಸತ್ಯಾಗ್ರಹವನ್ನೂ ರೈತರು ಆರಂಭಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಉಪವಾಸ ಕುಳಿತ ರೈತರ ಆರೋಗ್ಯದಲ್ಲಿ ಏರುಪೇರಾಗಿ ಓರ್ವ ರೈತ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಐವರು ರೈತರಿಂದ ಕಳೆದ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಯುತ್ತಿದ್ದು, ರಾಮಕೃಷ್ಣ ಎಂಬ ರೈತನನ್ನು ಆರೋಗ್ಯ ಸಿಬ್ಬಂದಿ ಹಾಗೂ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇನ್ನು ನಾಲ್ವರು ರೈತರ ಆರೋಗ್ಯದಲ್ಲಿಯೂ ಏರುಪೇರಾಗಿದೆ. ಉಪವಾಸ ನಿರತ ರೈತರ ಆರೋಗ್ಯ ತಪಾಸಣೆಯನ್ನು ಡಿಹೆಚ್ಓ ಡಾ.ಧನಂಜಯ್ ನೇತ್ವತದ ವೈದ್ಯರ ತಂಡ ಮಾಡುತ್ತಿದೆ.
ಉಪವಾಸ ನಿರತ ರೈತರಿಗೆ ಚಿಕಿತ್ಸೆ ಅಗತ್ಯವಿದೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡುವಂತೆ ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ವೈದ್ಯರ ಸೂಚನೆ ಮೇರೆಗೆ ರೈತರ ಮನವೊಲಿಕೆಗೆ ಪೊಲೀಸರು ಪ್ರಯತ್ನಿಸಿದರು. ಚಿಕಿತ್ಸೆ ಅಗತ್ಯವಿದ್ದು, ಉಪವಾಸ ಕೈ ಬಿಡಿ ಎಂದು ರೈತರಲ್ಲಿ ಮನವಿ ಮಾಡಿದರು. ಪೊಲೀಸರ ಮನವಿಗೂ ಕ್ಯಾರೇ ಎನ್ನದೆ ಅಧಿಕಾರಿಗಳ ವಿರುದ್ಧ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…