ಕೊನೆಗೂ ದಕ್ಕಿದ ಬಿಡುಗಡೆಯ ಭಾಗ್ಯ | 4 ವರ್ಷದ ಬಾಲಕಿ ಸೇರಿ 3ನೇ ಬ್ಯಾಚ್‍ನ 17 ಮಂದಿಯ ಬಿಡುಗಡೆ ಮಾಡಿದ ಹಮಾಸ್ |

November 27, 2023
1:43 PM

ಕೊನೆಗೂ ಕೆಲ ಅಮಾಯಕರ ಜೀವ ಉಳಿದಿದೆ. ತಮ್ಮದಲ್ಲ ತಪ್ಪಿಗೆ ಕಳೆದ ಅನೇಕ ದಿನಗಳಿಂದ ನರಕದಲ್ಲಿದ್ದ ಕೆಲ ನಾಗರೀಕರನ್ನು ಹಮಾಸ್‌ ಬಿಡುಗಡೆಗೊಳಿಸಿದೆ. ನಾಲ್ಕು ವರ್ಷದ ಇಸ್ರೇಲಿ-ಅಮೇರಿಕನ್ (Israeli-American) ಬಾಲಕಿ ಸೇರಿ ಮೂರನೇ ಬ್ಯಾಚ್‍ನ 17ಕ್ಕೂ ಹೆಚ್ಚು ಮಂದಿಯನ್ನು ಹಮಾಸ್ ಭಾನುವಾರ ಬಿಡುಗಡೆ ಮಾಡಿದೆ.

Advertisement
Advertisement

ಇಸ್ರೇಲ್ ಮತ್ತು ಹಮಾಸ್ (Israel- Hamas) ನಡುವಿನ ಒಪ್ಪಂದದ ಅಡಿಯಲ್ಲಿ 50 ಇಸ್ರೇಲಿ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದರೆ 150 ಪ್ಯಾಲೆಸ್ತೇನ್ ಕೈದಿಗಳನ್ನು ಇಸ್ರೇಲ್ ಬಿಡುಗಡೆ ಮಾಡಬೇಕು ಎಂದು ಹೇಳಲಾಗಿತ್ತು. ಹಾಗಾಗಿ ನಾಲ್ಕು ದಿನಗಳ ಕದನ ವಿರಾಮಕ್ಕೆ ಹಮಾಸ್ ಹಾಗೂ ಇಸ್ರೇಲ್ ಒಪ್ಪಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮೂರನೇ ಬ್ಯಾಚ್‍ನ 13 ಇಸ್ರೇಲಿಗಳು ಮತ್ತು 4 ವಿದೇಶಿ ಪ್ರಜೆಗಳ ಮೂರನೇ ಬ್ಯಾಚ್ ಅನ್ನು ರೆಡ್ ಕ್ರಾಸ್ ಸಂಸ್ಥೆಗೆ ಹಮಾಸ್ ಹಸ್ತಾಂತರಿಸಿದೆ ಎಂದು ಹೇಳಿದೆ. ಇಸ್ರೇಲ್ ಮತ್ತು ಹಮಾಸ್ ನಡುವೆ ನಾಲ್ಕು ದಿನಗಳ ಕದನ ವಿರಾಮ ನವೆಂಬರ್ 24 ರಂದು ಪ್ರಾರಂಭವಾಯಿತು.

Advertisement

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಗಾಜಾ ಪಟ್ಟಿಗೆ ತೆರಳಿ ಸೈನಿಕರಿಗೆ ಸ್ಫೂರ್ತಿ ತುಂಬಿದರು. ಮೊದಲು ಹಮಾಸ್ ಅನ್ನು ನಾಶ ಮಾಡುವುದು ಹಾಗೂ ಎರಡನೆಯದು ಎಲ್ಲಾ ಇಸ್ರೇಲಿ ಒತ್ತೆಯಾಳುಗಳನ್ನು ಮರಳಿ ತರುವುದು ನಮ್ಮ ಮೂಲ ಉದ್ದೇಶ ಎಂದರು. ಹಮಾಸ್ ಶನಿವಾರ ರಾತ್ರಿ ಒತ್ತೆಯಾಳುಗಳ 2ನೇ ಬ್ಯಾಚ್‍ನಲ್ಲಿ 17 ಜನರನ್ನು ಬಿಡುಗಡೆ ಮಾಡಿತ್ತು. ಇವರಲ್ಲಿ 13 ಇಸ್ರೇಲಿಗಳು ಮತ್ತು 4 ಥಾಯ್ ಪ್ರಜೆಗಳು ಸೇರಿದ್ದಾರೆ. 4 ದಿನಗಳ ಅವಧಿಯಲ್ಲಿ ಒಟ್ಟು 50 ಒತ್ತೆಯಾಳುಗಳನ್ನು 150 ಪ್ಯಾಲೇಸ್ತೀನಿಯನ್ ಕೈದಿಗಳೊಂದಿಗೆ ವಿನಿಮಯ ಮಾಡಿಕೊಳ್ಳಲಾಗುತ್ತಿದೆ. ಈ ನಡುವೆ ಒತ್ತೆಯಾಳುಗಳ ವಿನಿಮಯವಾಗಿ ಇಸ್ರೇಲ್ 39 ಪ್ಯಾಲೆಸ್ತೀನ್ ಕೈದಿಗಳನ್ನು ಬಿಡುಗಡೆ ಮಾಡಿದೆ.

A third batch of Israel and foreign hostages was released from Hamas captivity on Sunday evening as the group arrived in Israel. They numbered 17, including 14 Israelis and three Thai citizens. The Hamas Group handed over the former captives to the humanitarian organisation Red Cross and were further taken for medical examination.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಇಂದು ಕಾರ್ಗಿಲ್ ವಿಜಯೋತ್ಸವ ದಿನ : ನೂರಾರು ಸೈನಿಕರ ಪ್ರಾಣ ತ್ಯಾಗಕ್ಕೊಂದು ನಮನ
July 26, 2024
11:51 PM
by: The Rural Mirror ಸುದ್ದಿಜಾಲ
ನಮ್ಮ ಪ್ರಧಾನಿಯವರು ಹೇಳಿದಂತೆ ಅಟಕ್ ನಾ, ಲಟ್ ಕಾನಾ, ಬಟ್ ಕಾನಾ ಮಾತು ನಡೆಯುತ್ತಿಲ್ಲ : ರೈತರು ಇಂತ ಕಡೆ ಪ್ರಶ್ನಿಸುವಂತಾಗಬೇಕು
July 26, 2024
11:35 PM
by: The Rural Mirror ಸುದ್ದಿಜಾಲ
ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ಕೋರಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ : ಕೇಂದ್ರ ಸರ್ಕಾಕ್ಕೆ ಕೋರಿಕೆ
July 26, 2024
3:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 26-07-2024 | ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಮಳೆ | ಜುಲೈ 31 ರ ತನಕವೂ ಗಾಳಿ ಸಹಿತ ಮಳೆ ಸಾಧ್ಯತೆ |
July 26, 2024
12:40 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror