ವಿವಿಧೆಡೆ ಭೂ ಕುಸಿತ ಭೀತಿ | ಅಲರ್ಟ್‌ ಆದ ಸರ್ಕಾರ | ಮುನ್ನೆಚ್ಚರಿಕೆಯಾಗಿ ಚಾರ್ಮಾಡಿ ಘಾಟ್ ಬಳಿ ತಂಡ ನಿಯೋಜನೆ |

August 3, 2024
10:15 AM

ಮುಂಗಾರು ಆರ್ಭಟಿಸುತ್ತಿದ್ದಂತೆ ಬೆಟ್ಟ ಗುಡ್ಡಗಳಲ್ಲಿ ಭೂಕುಸಿತ ಉಂಟಾಗುತ್ತಿದೆ. ಉತ್ತರ ಕನ್ನಡದ ಶಿರೂರು , ಕೇರಳದ ವಯನಾಡು  ಪ್ರಕರಣ ಬೆನ್ನಲ್ಲೇ ಶಿರಾಡಿ ಘಾಟಿಯಲ್ಲೂ ಈವರೆಗೆ 6 ಬಾರಿ ಕುಸಿತ ಕಂಡಿದೆ. ಇದೀಗ ಚಾರ್ಮಾಡಿ ಘಾಟಿಯಲ್ಲಿ ಕೂಡ ಇದೇ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕಾಫಿನಾಡಿನಲ್ಲೂ ಜಿಲ್ಲಾಡಳಿತ ಹೈ ಅಲರ್ಟ್ ಆಗಿದೆ. ಚಾರ್ಮಾಡಿ ಘಾಟ್  ಆರಂಭದ ಸ್ಥಳವಾದ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್  ಬಳಿ ತಂಡವನ್ನು ನಿಯೋಜಿಸಿದೆ.

Advertisement
ನಿರಂತರ ಧಾರಾಕಾರ ಮಳೆಯಿಂದ ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಬೆಟ್ಟಗುಡ್ಡಗಳ ಮಾರ್ಗ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಯಾವ ಕ್ಷಣದಲ್ಲಿ ಬೇಕಾದರೂ ಯಾವುದೇ ರೀತಿಯ ಅನಾಹುತ ಸಂಭವಿಸುವ ಸಾಧ್ಯತೆ ಇರುವುರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ. ಡಿಆರ್ ವ್ಯಾನ್‌ನಲ್ಲಿ ಯಾವಾಗಲೂ ಓರ್ವ ಅಧಿಕಾರಿ ಸೇರಿ 7-8 ಸಿಬ್ಬಂದಿ ಇರುತ್ತಾರೆ. ಒಂದು ವೇಳೆ ಭಾರೀ ಮಳೆಯಿಂದ ಚಾರ್ಮಾಡಿ ಘಾಟಿಯಲ್ಲಿ ಏನಾದರೂ ಅನಾಹುತ ಸಂಭವಿಸದರೆ ತಕ್ಷಣ ಅಲ್ಲಿನವರ ಸಹಾಯಕ್ಕೆ ಪೊಲೀಸರು ಅಲರ್ಟ್ ಅಗಲಿದ್ದಾರೆ. ಈ ಕಾರಣಕ್ಕೆ ಕೊಟ್ಟಿಗೆಹಾರದಲ್ಲೇ ಒಂದು ವ್ಯಾನ್ ನಿಯೋಜಿಸಿದ್ದಾರೆ.

ಈ ಮಾರ್ಗ ಬೆಟ್ಟ-ಗುಡ್ಡಗಳ ನಡುವೆ 22 ಕಿ.ಮೀ. ಸಾಗಬೇಕಾಗಿದ್ದು, ಅತ್ಯಂತ ಅಪಾಯಕಾರಿಯಾಗಿದೆ. 2019 ರಿಂದಲೂ ಪ್ರತಿ ವರ್ಷ ಚಾರ್ಮಾಡಿ ಘಾಟಿ ಕುಸಿತಕ್ಕೊಳಗಾಗುತ್ತಲೇ ಇದೆ. ಚಾರ್ಮಾಡಿ ಘಾಟಿಯ ಒಂದು ಬದಿ ಬೆಟ್ಟ-ಗುಡ್ಡಗಳಿಂದ ಕೂಡಿದ್ರೆ ಮತ್ತೊಂದು ಬದಿ ಸಾವಿರಾರು ಅಡಿ ಪ್ರಪಾತ. ಹೀಗಾಗಿ ಇಲ್ಲಿ ಪೊಲೀಸರು ಯಾವಾಗಲೂ ಸರ್ವ ಸನ್ನದ್ಧರಾಗಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮನೆಯೊಳಗೆ ನುಗ್ಗಿದ ಚಿರತೆ | ಸತತ 5 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ |
April 4, 2025
4:45 PM
by: The Rural Mirror ಸುದ್ದಿಜಾಲ
ರಸ್ತೆ ಸರಕು ಸಾಗಾಣೆಯಲ್ಲೂ ತೀವ್ರ ಏರಿಕೆ  |  ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ
April 4, 2025
2:24 PM
by: The Rural Mirror ಸುದ್ದಿಜಾಲ
ಅಡಿಕೆಯ ನಾಡಿನಲ್ಲಿ ಉಪಬೆಳೆಯಾಗಿ ತರಕಾರಿ ಕೃಷಿ ಮಾಡಿದ ಯುವಕ
April 4, 2025
8:00 AM
by: ಮಹೇಶ್ ಪುಚ್ಚಪ್ಪಾಡಿ
ಅಭಯಾರಣ್ಯದಲ್ಲಿ ರಾತ್ರಿ ವೇಳೆ ವಾಹನಗಳ ಸಂಚಾರ ನಿಷೇಧಕ್ಕೆ ಮನವಿ
April 4, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group