ಚೀನಾದಿಂದ ರಸಗೊಬ್ಬರ ಆಮದು | ಬರೋಬ್ಬರಿ 18.65 ಲಕ್ಷ ಟನ್ ಯೂರಿಯಾ ಭಾರತಕ್ಕೆ

August 9, 2024
8:52 PM

2023-24ನೇ ಹಣಕಾಸು ವರ್ಷದಲ್ಲಿ 730 ದಶಲಕ್ಷ ಡಾಲರ್ ಅಂದರೆ ಸುಮಾರು 6127 ಕೋಟಿ ರೂಪಾಯಿ ಮೌಲ್ಯದ 18.6 ಲಕ್ಷ ಟನ್ ಯೂರಿಯಾವನ್ನು(urea) ಆ ದೇಶದಿಂದ ಆಮದು ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.

Advertisement

ಇದರ ಜತೆಗೆ 22.6 ಲಕ್ಷ ಟನ್ ಫಾಸ್ಪೇಟ್ ಮತ್ತು ಪೊಟ್ಯಾಷ್ ಯುಕ್ತ ರಸಗೊಬ್ಬರವನ್ನು ಕೂಡ ಚೀನಾದಿಂದ ಆಮದು ಮಾಡಿಕೊಳ್ಳಲಾಗಿದೆ ಎಂದು ಸರ್ಕಾರ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದೆ. ರಾಸಾಯನಿಕ ಮತ್ತು ರಸಗೊಬ್ಬರಗಳ ಖಾತೆ ಸಚಿವೆ ಅನುಪ್ರಿಯಾ ಪಟೇಲ್‌ ರಾಜ್ಯಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ಈ ವಿವರ ನೀಡಿದ್ದಾರೆ. ಉತ್ಪಾದನೆ ಮತ್ತು ಬೇಡಿಕೆ ನಡುವಿನ ಅಂತರವನ್ನು ಕಡಿಮೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಭಾರತ ಈ ಅವಧಿಯಲ್ಲಿ ಬರೋಬ್ಬರಿ ಒಟ್ಟು 21827 ಕೋಟಿ ರೂಪಾಯಿ ಮೌಲ್ಯದ 70.4 ಲಕ್ಷ ಟನ್ ಯೂರಿಯಾವನ್ನು ಆಮದು ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹಾಗೆ 106.5 ಲಕ್ಷ ಟನ್ ಫಾಸ್ಪೇಟ್ ಮತ್ತು ಪೊಟ್ಯಾಷ್‌ಯುಕ್ತ ಗೊಬ್ಬರವನ್ನು ಈ ಹಣಕಾಸು ವರ್ಷದಲ್ಲಿ ಆಮದು ಮಾಡಿಕೊಂಡಿದೆ. ಪಿ & ಕೆ ಗೊಬ್ಬರದ ಮೌಲ್ಯದ ಬಗ್ಗೆ ಮಾಹಿತಿ ಇಲ್ಲ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ
May 10, 2025
12:20 PM
by: ಸಾಯಿಶೇಖರ್ ಕರಿಕಳ
ಜೂನ್‌ನಿಂದ ಈ 6 ರಾಶಿಯವರ ಅದೃಷ್ಟ ಖುಲಾಯಿಸಲಿದೆ… ಕೋಟ್ಯಾಧಿಪತಿಗಳಾಗುವ ಯೋಗ!
May 10, 2025
8:07 AM
by: ದ ರೂರಲ್ ಮಿರರ್.ಕಾಂ
ಆಪರೇಷನ್ ಸಿಂದೂರ್ – ಪಾಕಿಸ್ತಾನದ ದಾಳಿಗೆ ಭಾರತದ ಪ್ರತ್ಯುತ್ತರ
May 9, 2025
8:00 PM
by: The Rural Mirror ಸುದ್ದಿಜಾಲ
ಭಾರತ, ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಳ | ವಾಯುಪಡೆಯ ನೆಲೆಯಿಂದ ಎಚ್ಚರಿಕೆ
May 9, 2025
7:49 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group