2023-24ನೇ ಹಣಕಾಸು ವರ್ಷದಲ್ಲಿ 730 ದಶಲಕ್ಷ ಡಾಲರ್ ಅಂದರೆ ಸುಮಾರು 6127 ಕೋಟಿ ರೂಪಾಯಿ ಮೌಲ್ಯದ 18.6 ಲಕ್ಷ ಟನ್ ಯೂರಿಯಾವನ್ನು(urea) ಆ ದೇಶದಿಂದ ಆಮದು ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಇದರ ಜತೆಗೆ 22.6 ಲಕ್ಷ ಟನ್ ಫಾಸ್ಪೇಟ್ ಮತ್ತು ಪೊಟ್ಯಾಷ್ ಯುಕ್ತ ರಸಗೊಬ್ಬರವನ್ನು ಕೂಡ ಚೀನಾದಿಂದ ಆಮದು ಮಾಡಿಕೊಳ್ಳಲಾಗಿದೆ ಎಂದು ಸರ್ಕಾರ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದೆ. ರಾಸಾಯನಿಕ ಮತ್ತು ರಸಗೊಬ್ಬರಗಳ ಖಾತೆ ಸಚಿವೆ ಅನುಪ್ರಿಯಾ ಪಟೇಲ್ ರಾಜ್ಯಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ಈ ವಿವರ ನೀಡಿದ್ದಾರೆ. ಉತ್ಪಾದನೆ ಮತ್ತು ಬೇಡಿಕೆ ನಡುವಿನ ಅಂತರವನ್ನು ಕಡಿಮೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಭಾರತ ಈ ಅವಧಿಯಲ್ಲಿ ಬರೋಬ್ಬರಿ ಒಟ್ಟು 21827 ಕೋಟಿ ರೂಪಾಯಿ ಮೌಲ್ಯದ 70.4 ಲಕ್ಷ ಟನ್ ಯೂರಿಯಾವನ್ನು ಆಮದು ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹಾಗೆ 106.5 ಲಕ್ಷ ಟನ್ ಫಾಸ್ಪೇಟ್ ಮತ್ತು ಪೊಟ್ಯಾಷ್‌ಯುಕ್ತ ಗೊಬ್ಬರವನ್ನು ಈ ಹಣಕಾಸು ವರ್ಷದಲ್ಲಿ ಆಮದು ಮಾಡಿಕೊಂಡಿದೆ. ಪಿ & ಕೆ ಗೊಬ್ಬರದ ಮೌಲ್ಯದ ಬಗ್ಗೆ ಮಾಹಿತಿ ಇಲ್ಲ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…