ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿಯಲ್ಲಿ ತಿಳಿಸಿದ್ದಾರೆ. ಯೂರಿಯಾ ರಸಗೊಬ್ಬರದ ಬಳೆಯಿಂದಾಗುವ ದುಷ್ಟಪರಿಣಾಮಗಳು ಹಾಗೂ ಕೃಷಿ ಹೊಂಡಗಳ ಸುತ್ತ ತಂತಿ ಬೇಲಿ ಅಳವಡಿಕೆ ಕುರಿತು ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ರಸಗೊಬ್ಬರ ಕುರಿತು ಜಾಗೃತಿ ಮೂಡಿಸುವ ಹಸ್ತಪ್ರತಿಕೆಗಳನ್ನು ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು ಅತಿಯಾದ ರಾಸಾಯನಿಕ ಗೊಬ್ಬರ ಬಳಕೆಯಿಂದ ಭೂಮಿ ಫಲವತ್ತತೆ ಹಾಳಾಗುತ್ತಿದ್ದು, ಮಣ್ಣಿನ ಮಾಲಿನ್ಯ ಉಂಟಾಗುತ್ತಿದೆ, ರೈತರು ವೈಜ್ಞಾನಿಕ ಶಿಫಾರಸ್ಸಿನಂತೆ ಕೃಷಿಯಲ್ಲಿ ರಸಗೊಬ್ಬರದ ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಎಚ್.ಡಿ ಕೊಳೆಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement


