Advertisement
Opinion

ದೀಪಗಳ ಹಬ್ಬ ದೀಪಾವಳಿ | ನರಕ ಚತುರ್ದಶಿ ವಿಶೇಷತೆ ಹಾಗೂ ಹಿನ್ನೆಲೆಯೇನು?

Share

ದೀಪಗಳ ಹಬ್ಬ ದೀಪಾವಳಿ(Diwali). ಅನೇಕ ಪುರಾಣ ಇತಿಹಾಸಗಳನ್ನು ಒಳಗೊಂಡಿರುವ ಈ ಹಬ್ಬವನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಐದು ದಿನಗಳ ಕಾಲ ಆಚರಿಸುವ ದೊಡ್ಡ ಹಬ್ಬ ಇದು. ವರ್ಷದ ಕೊನೆಯಲ್ಲಿ ಬರುವ ಈ ಹಬ್ಬವನ್ನು ಉತ್ತರ ಭಾರತದಲ್ಲಿ ಹೊಸ ವರ್ಷದ(New year) ಹಬ್ಬ ಎನ್ನುವ ರೀತಿಯಲ್ಲೂ ಆಚರಿಸುತ್ತಾರೆ. ಮನೆಯನ್ನು ಹಣತೆಯ(Diya) ದೀಪದಿಂದ ಅಲಂಕರಿಸಿ, ಸಿಹಿ ಭೋಜನ ಹಾಗೂ ಪಟಾಕಿ(Cracker) ಸಿಡಿಸುವುದರ ಮೂಲಕ ಹಬ್ಬದ ಆಚರಣೆ(Celebration) ಸಂಭ್ರಮ-ಸಡಗರದಿಂದ ನೆರವೇರುವುದು.

Advertisement
Advertisement

ನರಕ ಚತುರ್ದಶಿ(Narak Chaturdashi), ಈ ದಿನ ಅಸುರ (ರಾಕ್ಷಸ) ನರಕಾಸುರನನ್ನು ಕೃಷ್ಣ, ಸತ್ಯಭಾಮ ಮತ್ತು ಕಾಳಿ ಕೊಂದರು ಎಂದು ಪುರಾಣ ಒದಗಿಸುವ ಮಾಹಿತಿ. ನರಕ ಚತುರ್ದಶಿ ( ಕಾಳಿಯಾ ಚೌದಸ್ , ರೂಪ್ ಚೌದಸ್, ಛೋಟಿ ದೀಪಾವಳಿ, ನರಕ ನಿವಾರಣ ಚತುರ್ದಶಿ ಅಥವಾ ಭೂತ ಚತುರ್ದಶಿ ಎಂದೂ ಕರೆಯಲಾಗುತ್ತದೆ) ಶಾಲಿವಾಹನ ಶಕೆಯ ಅಶ್ವಿನ ತಿಂಗಳಿನ ಕೃಷ್ಣ ಪಕ್ಷ ದಲ್ಲಿ ಚತುರ್ದಶಿ ಅಂದರೆ ೧೪ನೇ ದಿನ ಬರುವ ಹಬ್ಬವಾಗಿದೆ. ಇದು ಐದು ದಿನಗಳ ಕಾಲ ನಡೆಯುವ ದೀಪಾವಳಿ ಹಬ್ಬದ ಎರಡನೇ ದಿನವಾಗಿದೆ.

Advertisement

ಈ ಹಬ್ಬವನ್ನು “ಕಾಲಿ ಚೌದಾಸ್”(Kali Chaudas) ಎಂದೂ ಕರೆಯುತ್ತಾರೆ, ಅಲ್ಲಿ ಕಾಲಿ ಎಂದರೆ ಕತ್ತಲೆ (ಶಾಶ್ವತ) ಮತ್ತು ಚೌದಸ್ ಎಂದರೆ ಹದಿನಾಲ್ಕನೆಯದು, ಇದನ್ನು ಅಶ್ವಿನ ಮಾಸದ 14 ನೇ ದಿನದಂದು ಆಚರಿಸಲಾಗುತ್ತದೆ. ಭಾರತದ ಕೆಲವು ಪ್ರದೇಶಗಳಲ್ಲಿ, ಕಾಳಿ ಚೌದಸ್ ಮಹಾಕಾಳಿ ಅಥವಾ ಶಕ್ತಿಯ ಪೂಜೆಗೆ ನಿಗದಿಪಡಿಸಿದ ದಿನವಾಗಿದೆ ಮತ್ತು ಈ ದಿನ ಕಾಳಿಯು ರಾಕ್ಷಸನಾದ ನರಕಾಸುರನನ್ನು ಕೊಂದಳು ಎಂದು ನಂಬಲಾಗಿದೆ. ಆದ್ದರಿಂದ ನರಕ-ಚತುರ್ದಶಿ ಎಂದೂ ಕರೆಯುತ್ತಾರೆ, ಕಾಳಿ ಚೌದಸ್ ಸೋಮಾರಿತನವನ್ನು ಹಾಗೂ ದುಷ್ಟತನವನ್ನು ತೊಡೆದುಹಾಕಲು ಮತ್ತು ನಮ್ಮ ಜೀವನದಲ್ಲಿ ಬೆಳಕು ಚೆಲ್ಲುವ ದಿನವಾಗಿದೆ. ನರಕ ಚತುರ್ದಶಿಯನ್ನು ದೀಪಾವಳಿಗೆ ಕೇವಲ ಒಂದು ದಿನ ಮೊದಲು ಆಚರಿಸಲಾಗುತ್ತದೆ, ಇದನ್ನು ಸಣ್ಣ ದೀಪಾವಳಿ ಎಂದೂ ಕರೆಯುತ್ತಾರೆ.

ಶ್ರೀಮದ್ಭಾಗವತ ಪುರಾಣದಲ್ಲಿ ಹೀಗೊಂದು ಕಥೆಯಿದೆ – ಹಿಂದೆ ಪ್ರಾಗ್‌ಜ್ಯೋತಿಷಪುರ ಎಂಬಲ್ಲಿ ಭೌಮಾಸುರ ಅಥವಾ ನರಕಾಸುರನೆಂಬ ಒಬ್ಬ ಬಲಾಢ್ಯ ರಾಕ್ಷಸನು ರಾಜ್ಯವನ್ನಾಳುತ್ತಿದ್ದನು. ಅವನು ದೇವತೆಗಳಿಗೆ ಮತ್ತು ಮಾನವರಿಗೆ ಬಹಳ ತೊಂದರೆ ಗಳನ್ನು ಕೊಡತೊಡಗಿದನು. ರಾಕ್ಷಸನಾದ ನರಕಾಸುರನು ಭೂಮಿತಾಯಿಯ ಮಗ. ಇವನು ಹಲವಾರು ರಾಜ್ಯಗಳನ್ನು ಆಳುತ್ತಿದ್ದನು. ಇವನ ಆಳ್ವಿಕೆಯಲ್ಲಿ ಸಾಕಷ್ಟು ದೌರ್ಜನ್ಯ ಹಾಗೂ ಮೋಸಗಳನ್ನು ಮಾಡುತ್ತಿದ್ದನು. ಭೂಮಿಯ ಮೇಲೆ ತನ್ನದೇ ಆಡಳಿತ ಮಾಡುತ್ತಾ ದುರಹಂಕಾರಕ್ಕೆ ಒಳಗಾಗಿದ್ದನು. ನಂತರ ತಾನು ಸ್ವರ್ಗವನ್ನು ಆಳಬೇಕು ಎಂದು ಯಸಿದನು. ಈ ಬಯಕೆಯ ಪ್ರಯುಕ್ತ ಯುದ್ಧಕ್ಕಾಗಿ ಇಂದ್ರ ದೇವನನ್ನು ಆಹ್ವಾನಿಸಿದನು.

ಈ ದುಷ್ಟದೈತ್ಯನು ಸ್ತ್ರೀಯರನ್ನು ಪೀಡಿಸತೊಡಗಿದನು. ಅವನು ತಾನು ಜಯಿಸಿ ತಂದಿದ್ದ ೧೬೦೦೦ ವಿವಾಹಯೋಗ್ಯ ರಾಜಕನ್ಯೆಯರನ್ನು ಸೆರೆವಾಸದಲ್ಲಿಟ್ಟು ಅವರೊಂದಿಗೆ ವಿವಾಹವಾಗುವ ಹುನ್ನಾರವನ್ನು (ಯುಕ್ತಿಯನ್ನು) ಮಾಡಿದ್ದನು. ಇದರಿಂದ ಎಲ್ಲ ಕಡೆಗಳಲ್ಲಿಯೂ ಹಾಹಾಕಾರವೆದ್ದಿತು. ಶ್ರೀಕೃಷ್ಣನಿಗೆ ಈ ವೃತ್ತಾಂತವು ತಿಳಿದ ಕೂಡಲೇ ಅವನು ಸತ್ಯಭಾಮೆಯೊಂದಿಗೆ ಬಂದು ನರಕಾಸುರನೊಂದಿಗೆ ಯುದ್ಧವನ್ನು ಮಾಡಿ ನರಕಾಸುರನನ್ನು ವಧಿಸಿದನು ಮತ್ತು ಆ ರಾಜಕನ್ಯೆಯರನ್ನು ಮುಕ್ತಗೊಳಿಸಿದನು. ಸಾಯುವಾಗ ನರಕಾಸುರನು ಕೃಷ್ಣನಲ್ಲಿ ‘ಇಂದಿನ ತಿಥಿಗೆ ಯಾರು ಮಂಗಲಸ್ನಾನವನ್ನು ಮಾಡುತ್ತಾರೆಯೋ, ಅವರಿಗೆ ನರಕದ ತೊಂದರೆಯಾಗದಿರಲಿ’ ಎಂಬ ವರವನ್ನು ಬೇಡಿದನು ಮತ್ತು ಕೃಷ್ಣನು ಆ ವರವನ್ನು ಕೊಟ್ಟನು. ಅಂದಿನಿಂದ ಆಶ್ವಯುಜ ಕೃಷ್ಣ ಚತುರ್ದಶಿಯು ನರಕ ಚತುರ್ದಶಿಯೆಂದು ಪರಿಗಣಿಸಲ್ಪಟ್ಟಿತು ಮತ್ತು ಜನರು ಆ ದಿನ ಸೂರ್ಯೋದಯಕ್ಕೆ ಮೊದಲು ಎದ್ದು ಅಭ್ಯಂಗಸ್ನಾನವನ್ನು ಮಾಡತೊಡಗಿದರು. ಚತುರ್ದಶಿಯಂದು ಬೆಳಗಿನ ಜಾವದಲ್ಲಿ ನರಕಾಸುರನನ್ನು ವಧಿಸಿ ಅವನ ರಕ್ತದ ತಿಲಕವನ್ನು ಹಣೆಯ ಮೇಲೆ ಇಟ್ಟುಕೊಂಡು ಶ್ರೀಕೃಷ್ಣನು ಮನೆಗೆ ಬಂದ ಕೂಡಲೇ ತಾಯಂದಿರು ಅವನನ್ನು ಆಲಿಂಗಿಸಿಕೊಂಡರು. ಸ್ತ್ರೀಯರು ಆರತಿ ಎತ್ತಿ ತಮ್ಮ ಆನಂದವನ್ನು ವ್ಯಕ್ತಪಡಿಸಿದರು.’

Advertisement

Kali Chaudas, also known as Narak Chaturdashi, is a day dedicated to the worship of Goddess Kali. It falls on the 14th day of Krishna Paksha in the month of Kartik. This year, it will be observed on November 11, 2023. People offer prayers to Goddess Kali to seek protection from negative energies and evil spirits.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಣ್ಣುಗಳ ರಾಜ ಮಾವಿಗೂ ತಟ್ಟಿದ ಬಿಸಿಲಿನ ತಾಪ | 400 ಕೋಟಿ ಮೌಲ್ಯದ ಮಾವು ನಷ್ಟ |

ತಾಪಮಾನದ ಕಾರಣದಿಂದ ಮಾವಿನ ಬೆಳೆಗೂ ಸಂಕಷ್ಟವಾಗಿದೆ.

12 hours ago

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |

ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

2 days ago

ಕರ್ನಾಟಕದಾದ್ಯಂತ ಗೋಕೃಪಾಮೃತ ವಿತರಣೆ | ಗೋಕೃಪಾಮೃತ ಇರುವಾಗ ಕ್ರಿಮಿನಾಶಕಗಳ ಹಂಗೇಕೆ?

ಗೋಕೃಪಾಮೃತದ ಬಗ್ಗೆ ಡಾ ಬಿ ಎಂ ನಾಗಭೂಷಣ ಅವರು ಬರೆದಿದ್ದಾರೆ..

2 days ago

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…

2 days ago

ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…

2 days ago

ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ : ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು

ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…

2 days ago