ಸೆ.22 ರಿಂದ ಸಾಗರದಲ್ಲಿ ಸಂಭ್ರಮದ ‘ನವರಾತ್ರ ನಮಸ್ಯ’ | ರಾಘವೇಶ್ವರ ಶ್ರೀಗಳ ಅದ್ದೂರಿ ಪುರಪ್ರವೇಶ

September 19, 2025
9:47 PM

ಸೆಪ್ಟೆಂಬರ್ 22 ರಿಂದ ಸಾಗರದ ಅಗ್ರಹಾರದಲ್ಲಿ ಶ್ರೀ ರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ  ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ ದಿವ್ಯಸಾನ್ನಿಧ್ಯದಲ್ಲಿ ಆರಂಭಗೊಳ್ಳಲಿರುವ “ನವರಾತ್ರ ನಮಸ್ಯಾ” ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ನಾಳೆ ಗೋಕರ್ಣದಿಂದ ಶ್ರೀಗಳು ಸಾಗರಕ್ಕೆ ಪುರಪ್ರವೇಶ ಮಾಡಲಿದ್ದು, ಸಾಗರ ನಗರದಲ್ಲಿ ಸಮಷ್ಟಿ ಸಮಾಜದಿಂದ ಅದ್ದೂರಿ ಸ್ವಾಗತದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.

ಸೆ. 22 ರಿಂದ ನವರಾತ್ರಿ ನಮಸ್ಯಾ ಧಾರ್ಮಿಕ ಕಾರ್ಯಕ್ರಮ ಪ್ರಾರಂಭ ಗೊಳ್ಳಲಿದೆ. ಪ್ರತಿದಿನ ಮಧ್ಯಾಹ್ನ 3.30 ರಿಂದ 5 ಗಂಟೆಯವರೆಗೆ ಲಲಿತೋಪಾಖ್ಯಾನ ಪ್ರವಚನ ಇರುತ್ತದೆ. ನಂತರ ದೀಪಾಲಂಕಾರ, ದುರ್ಗಾದೀಪ ಪೂಜೆ, ಕುಂಕುಮಾರ್ಚನೆ ಏರ್ಪಡಿಸಲಾಗಿದೆ. ಪ್ರತಿದಿನ ಬೆಳಿಗ್ಗೆಯಿಂದ ಸಂಜೆಯವರೆಗೆ ವಿವಿಧ ಧಾರ್ಮಿಕ ಕಾರ್ಯ ಕ್ರಮಗಳು ನಡೆಯಲಿದೆ. ಏಕಾದಶಿ ದಿನ ವಿಶೇಷ ಶ್ರೀಚಕ್ರ ಆರಾಧನೆ ಇರುತ್ತದೆ.

ಹೊಸನಗರ , ಸಾಗರ, ಸಿದ್ದಾಪುರ ಒಳಗೊಂಡ ಸಾಗರ ಪ್ರಾಂತ್ಯದ ಶಿಷ್ಯಭಕ್ತರ ಸಮಿತಿ ಇದೇ ಪ್ರಥಮ ಬಾರಿ ಸಾಗರದಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ವಿಜೃಂಭಣೆಗೆ ಎಲ್ಲ ರೀತಿಯ ಸಿದ್ದತೆ ಮಾಡಿಕೊಂಡಿದೆ. ನವರಾತ್ರ ನಮಸ್ಯಾಕ್ಕೆ ಸಮಸ್ತರನ್ನು ಆಹ್ವಾನಿಸುವ ಅಕ್ಷತಾಭಿಯಾನ ಒಂದೂವರೆ ತಿಂಗಳ ಹಿಂದೆಯೇ ಆರಂಭಗೊಂಡಿದ್ದು ಮನೆಮನೆಗೆ ಆಹ್ವಾನ ನೀಡುವ ಕಾರ್ಯವನ್ನು ಶ್ರೀಮಠದ ಮಾತೃ ವಿಭಾಗದ ಮಾತೆಯರು ನಡೆಸಿದ್ದಲ್ಲದೆ ಉಡಿ ಸೇವೆಯೂ ಸೇರಿದಂತೆ ಜಗನ್ಮಾತೆಯ ಆರಾಧನೆಗೆ ಪೂರಕವಾಗಿರುವ ಸಕಲ ಸಿದ್ದತೆಗೆ ತಂಡೋಪತಂಡವಾಗಿ ಆಗಮಿಸಿ ಕೆಲಸ ಮಾಡುತ್ತಿದ್ದಾರೆ. ಈ ಕಾರ್ಯದಲ್ಲಿ ಇಡಿ ಮಹಾಮಂಡಲ ವ್ಯಾಪ್ತಿಯ ಸಾವಿರಾರು ಮಾತಾ ಕಾರ್ಯಕರ್ತರು ತೊಡಗಿಸಿಕೊಂಡಿದ್ದಾರೆ.

ಇನ್ನು ಧಾರ್ಮಿಕದಿಂದ ಹಿಡಿದು ಸಾಂಸ್ಕøತಿಕದವರೆಗೆ, ಶಬರಿ ಆತಿಥ್ಯದಿಂದ ಹಿಡಿದು ಸೇವಾ ಕೇಂದ್ರದವರೆಗೆ ಗಣ್ಯರಾಗಮನದ ಸ್ವಾಗತದಿಂದ ಹಿಡಿದು ಪ್ರಸಾದ ವಿತರಣೆಯವರೆಗೆ ಸಮಿತಿಯಿಂದ ರೂಪುಗೊಂಡಿರುವ 14 ವಿಭಾಗದ ಸಂಚಾಲಕರು ಅವರೊಂದಿಗೆ ಪ್ರತಿ ಸಂಚಾಲಕರ ತಂಡದಲ್ಲಿ ತಲಾ 10 ಸಹ ಸಂಚಾಲಕರು ಹೀಗೆ 500 ಹೆಚ್ಚು ಕಾರ್ಯಕರ್ತರು ಈ ನವರಾತ್ರ ಸಮಸ್ಯಾ ಕಾರ್ಯಕ್ರಮದಲ್ಲಿ ಸೇವೆ ಮಾಡಲಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಈಗಾಗಲೆ ಧಾರ್ಮಿಕ ಕಾರ್ಯಕ್ರಮಕ್ಕೆ ಅಗತ್ಯವಿರುವ ಹಾಗೂ ಪ್ರಸಾದ ಭೋಜನದ ವ್ಯವಸ್ಥೆಗೂ ಸೇರಿ ಅಪಾರ ಸಂಖ್ಯೆಯ ಶಿಷ್ಯ ಭಕ್ತರು ಹೊರೆಗಾಣಿಕೆ ರೂಪದಲ್ಲಿ ಸುವಸ್ತುಗಳನ್ನು ಸಮರ್ಪಿಸುತ್ತಿರುವುದು ವಿಶೇಷವಾಗಿ ಕಂಡು ಬರುತ್ತಿದೆ. 15 ದಿನಗಳ ಸೇವೆಗಾಗಿ ವಿವಿಧ ಭಾಗದಿಂದ ಕಾರ್ಯಕರ್ತರು ಹೆಸರು ನೊಂದಾಯಿಸಿಕೊಳ್ಳುತ್ತಿದ್ದಾರೆ.

ನವರಾತ್ರ ನಮಸ್ಯಾ ಪೂರ್ಣ ಸಿದ್ದತೆಯನ್ನು ಶುಕ್ರವಾರ ಸಮಿತಿಯ ಅಧ್ಯಕ್ಷ ಗುರುಮೂರ್ತಿ ಹೆಗಡೆ ಕಲ್ಸೆಮನೆ ಶಿಕಾರಿಪುರ ಅವರು ಸಂಚಾಲನ ತಂಡದ ಪ್ರಮುಖರೊಂದಿಗೆ ವೀಕ್ಷಿಸಿದರು. ಹಾಗೂ ಈ ವೇಳೆ ಮಾತನಾಡಿದ ಅವರು ಲೋಕಕಲ್ಯಾಣಾರ್ಥವಾಗಿ ಸಂಕಲ್ಪಗೊಂಡು ಸಾಗರದಲ್ಲಿ ನಡೆಯುತ್ತಿರುವ ನವರಾತ್ರ ನಮಸ್ಯಾದಲ್ಲಿ ಸಮಸ್ತರು ಪಾಲ್ಗೊಳ್ಳಬೇಕು ಎಂದು ಪ್ರೀತಿಯ ಕರೆ ನೀಡಿದ್ದಾರೆ. ಈ ವೇಳೆ ಕ್ರಿಯಾ ಸಮಿತಿಯ ಸಂಚಾಲಕ ಮುರಳಿ ಗೀಜಗಾರು, ಸಂಯೋಜಕ ಶಿವರಾಮಯ್ಯ, ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಹೆಗಡೆ ಕೆರೆಕೈ , ಗುರುಪಾದ ಭೀಮನಕೋಣೆ ಸೇರಿದಂತೆ ವಿವಿಧ ವಿಭಾಗದ ಸಂಚಾಲಕರು ಇದ್ದರು.

ಇಂದು ಪುರ ಪ್ರವೇಶ : ನವರಾತ್ರ ನಮಸ್ಯಾ ಕಾರ್ಯಕ್ರಮದಲ್ಲಿ ದಿವ್ಯಸಾನ್ನಿಧ್ಯವಹಿಸಲಿರುವ ಶ್ರೀರಾಘವೇಶ್ವರ ಭಾರತೀ ಶ್ರೀಗಳವರ ಪುರಪ್ರವೇಶ ಕಾರ್ಯಕ್ರಮ ಶನಿವಾರ ಸಂಜೆ 5.30 ಗಂಟೆಗೆ ಇಲ್ಲಿನ ಶಾರದಾಂಬ ವೃತ್ತದಿಂದ ಆಯೋಜಿಸಲಾಗಿದೆ. ಅಲ್ಲಿಂದ ಚಾಮರಾಜಪೇಟೆ ಮಾರ್ಗವಾಗಿ ಗಣಪತಿ ದೇವಸ್ಥಾನದವರೆಗೆ ಭವ್ಯ ಮೆರವಣಿಗೆ ನಡೆಯಲಿದೆ. 500 ಕ್ಕೂ ಹೆಚ್ಚು ಮಾತೆಯರಿಂದ ಪೂರ್ಣ ಕುಂಭ ಸ್ವಾಗತ, ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳಿಂದ ನಾದಸ್ವರ ವಾದನ, ಪ್ರಸಿದ್ದ ಮೂರು ಚಂಡೆ ತಂಡಗಳಿಂದ ಚೆಂಡೆ ವಾದನ, ಶ್ರೀರಾಮನ ಆಕೃತಿಯ ವಿಶೇಷ ಮೂರ್ತಿಯ ಆಕರ್ಷಣೆ, ಹಾಗೂ ಸಾಗರ ನಗರದ ವಿವಿಧ ಸಮಾಜದ 20 ಕ್ಕೂ ಹೆಚ್ಚು ತಂಡಗಳಿಂದ ಭಜನೆ, ಮತ್ತು ವಿಶೇಷವಾಗಿ ಕುಂದಾಪುರ ಶಿರೂರಿನ ಪರಿಣಿತ ಕಲಾವಿದರಿಂದ ನೃತ್ಯ ಭಜನಾ ತಂಡ ಈ ಪುರಪ್ರವೇಶ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದೆ ಎಂದು ಪುರ ಪ್ರವೇಶ ಮತ್ತು ನಗರಾಲಂಕಾರ ಸಂಚಾಲಕ ಕೆ.ಆರ್. ಗಣೇಶ್‍ಪ್ರಸಾದ್ ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror