ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು ಒಂದು ಲಕ್ಷ ಮಹಿಳಾ ಸದಸ್ಯರಿಗೆ ಕಾಫಿ ತಯಾರಿಕೆ ತಂತ್ರಜ್ಞಾನ ಮತ್ತು, ಕೌಶಲ್ಯವನ್ನು ಕಲ್ಪಿಸುವ ಸಲುವಾಗಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಿಶೇಷ ಫಿಲ್ಟರ್ ಕಾಫಿ ಕೆಫೆಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಜೀವನೋಪಾಯ ಮತ್ತು ಭಾರತೀಯ ಕಾಫಿ ಮಂಡಳಿಯ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಭಾರತೀಯ ಕಾಫಿ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಜಿ.ಕೆ ಜಗದೀಶ್, ರಾಷ್ಟ್ರೀಯ ಜೀವನೋಪಾಯ ಅಭಿಯಾನ ಕರ್ನಾಟಕ ನಿರ್ದೇಶಕರಾದ, ಶ್ರೀವಿದ್ಯಾ ಒಪ್ಪಂದಕ್ಕೆ ಸಹಿ ಹಾಕಿದರು. ಡಾ. ಜಿ.ಕೆ ಜಗದೀಶ್, ಮಾತನಾಡಿ ಈ ಮಹತ್ವದ ಯೋಜನೆ ರಾಜ್ಯಾದ್ಯಂತ ಕಾಫಿ ನವೋದ್ಯಮವನ್ನು ಉತ್ತೇಜಿಸಲು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement