ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ | ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ |

April 25, 2024
3:00 PM

ಅಮೇಥಿ(Amethi) ಮತ್ತು ರಾಯ್ ಬರೇಲಿ(Raebareli)  ಉತ್ತರ ಪ್ರದೇಶದ(Uttar Pradesh) ಈ ಎರಡು ಕ್ಷೇತ್ರಗಳು ಕಾಂಗ್ರೆಸ್‌ನ(Congress) ಭದ್ರ ಕೋಟೆ. ಆದರೆ ಕಳೆದ ಬಾರಿ ಬಿಜೆಪಿ(BJP) ಅಭ್ಯರ್ಥಿ ಸ್ಮೃತಿ ಇರಾನಿ(Smrithi Irani) ವಿರುದ್ಧ ರಾಹುಲ್‌ ಗಾಂಧಿ ಹಿನಾಯ ಸೋಲುಂಡಿದ್ದರು. ಕಾಂಗ್ರೆಸ್‌ ನ ಹಿರಿಯರೆಲ್ಲಾ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದು ಬೀಗಿದ್ದರು. ಆದರೆ ಈ ಬಾರಿಯೂ ರಾಹುಲ್‌ ಗಾಂಧಿಗೆ(Rahul Gandhi) ಅಮೇಥಿ ಸುಲಭದ ಹಾದಿಯಲ್ಲ. ಉತ್ತರ ಪ್ರದೇಶದ ಎರಡು ಹೈವೊಲ್ಟೇಜ್ ಕ್ಷೇತ್ರಗಳಾದ ಅಮೇಥಿ  ಮತ್ತು ರಾಯ್ ಬರೇಲಿಯಿಂದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ(Priyanka Gandhi) ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ. ಈ ವಾರಂತ್ಯದಲ್ಲಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಸೋನಿಯಾ ಗಾಂಧಿ (Sonia Gandhi) ರಾಜ್ಯಸಭೆಗೆ ಆಯ್ಕೆಯಾಗಿದ್ದು, ಇತ್ತ ರಾಯ್ ಬರೇಲಿ ಮತ್ತು ವಯನಾಡ್ ನಿಂದ ರಾಹುಲ್ ಗಾಂಧಿ  ಸ್ಪರ್ಧಿಸಿರುವ ಹಿನ್ನೆಲೆ ಅಮೇಥಿಯಿಂದ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವ ಚರ್ಚೆ ಹುಟ್ಟು ಹಾಕಿದೆ. ಅಲ್ಲದೇ ಕಾಂಗ್ರೆಸ್ ಕೂಡಾ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸದೆ ಕುತೂಹಲ ಹೆಚ್ಚಿಸಿತ್ತು.

ಈ ನಡುವೆ ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ  ಹಾಗೂ ಅಮೇಥಿಯಿಂದ ರಾಬರ್ಟ್ ವಾದ್ರಾ ಸ್ಪರ್ಧಿಸುವ ಚರ್ಚೆಗಳು ಕೇಳಿ ಬಂದಿತ್ತು. ಅವರ ಬ್ಯಾನರ್ ಪೋಸ್ಟರ್ ಗಳನ್ನು ಕಾರ್ಯಕರ್ತರು ಕ್ಷೇತ್ರದಲ್ಲಿ ಹಾಕಿದ್ದರು‌. ಅಮೇಥಿಯಿಂದ ನನ್ನ ಸ್ಪರ್ಧೆಯನ್ನು ಜನರು ಬಯಸಿದ್ದಾರೆ ಎಂದು ಖುದ್ದು ರಾಬರ್ಟ್ ವಾದ್ರಾ ಹೇಳಿಕೆ ನೀಡಿದ್ದರು. 1960 ರಿಂದ ರಾಯ್ ಬರೇಲಿ ಕ್ಷೇತ್ರ (Raebareli Constituency) ಕಾಂಗ್ರೆಸ್ ಭದ್ರಕೋಟೆಯಾಗಿದೆ. ಫಿರೋಜ್ ಗಾಂಧಿ, ಇಂದಿರಾ ಗಾಂಧಿ ಕೂಡಾ ಇಲ್ಲಿಂದ ಸ್ಪರ್ಧಿಸಿದ್ದರು. 2006 ರಿಂದ ಸೋನಿಯಾ ಗಾಂಧಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು‌. ಸೋನಿಯಾ ಗಾಂಧಿ ರಾಜ್ಯಸಭೆ ಆಯ್ಕೆ ಬಳಿಕ ಪ್ರಿಯಾಂಕಾ ಗಾಂಧಿ ಪ್ರಬಲ ಸ್ಪರ್ಧಿಯಾಗಿದ್ದಾರೆ. ಆದರೆ ಅಮೇಥಿಯಲ್ಲಿ ಕಳೆದ ಬಾರಿ ರಾಹುಲ್ ಗಾಂಧಿ ಸೋಲನ್ನಪ್ಪಿದ್ದು ಈ ಬಾರಿಯೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಪ್ರಬಲ ಸ್ಪರ್ಧೆ ನೀಡುತ್ತಿರುವ ಹಿನ್ನೆಲೆ ರಾಹುಲ್ ಗಾಂಧಿಗೆ ಕಷ್ಟಕರವಾಗಿದೆ.

Advertisement
  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror