ಅಮೇಥಿ(Amethi) ಮತ್ತು ರಾಯ್ ಬರೇಲಿ(Raebareli) ಉತ್ತರ ಪ್ರದೇಶದ(Uttar Pradesh) ಈ ಎರಡು ಕ್ಷೇತ್ರಗಳು ಕಾಂಗ್ರೆಸ್‌ನ(Congress) ಭದ್ರ ಕೋಟೆ. ಆದರೆ ಕಳೆದ ಬಾರಿ ಬಿಜೆಪಿ(BJP) ಅಭ್ಯರ್ಥಿ ಸ್ಮೃತಿ ಇರಾನಿ(Smrithi Irani) ವಿರುದ್ಧ ರಾಹುಲ್ ಗಾಂಧಿ ಹಿನಾಯ ಸೋಲುಂಡಿದ್ದರು. ಕಾಂಗ್ರೆಸ್ ನ ಹಿರಿಯರೆಲ್ಲಾ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದು ಬೀಗಿದ್ದರು. ಆದರೆ ಈ ಬಾರಿಯೂ ರಾಹುಲ್ ಗಾಂಧಿಗೆ(Rahul Gandhi) ಅಮೇಥಿ ಸುಲಭದ ಹಾದಿಯಲ್ಲ. ಉತ್ತರ ಪ್ರದೇಶದ ಎರಡು ಹೈವೊಲ್ಟೇಜ್ ಕ್ಷೇತ್ರಗಳಾದ ಅಮೇಥಿ ಮತ್ತು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ(Priyanka Gandhi) ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. ಈ ವಾರಂತ್ಯದಲ್ಲಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.
ಈ ನಡುವೆ ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ ಹಾಗೂ ಅಮೇಥಿಯಿಂದ ರಾಬರ್ಟ್ ವಾದ್ರಾ ಸ್ಪರ್ಧಿಸುವ ಚರ್ಚೆಗಳು ಕೇಳಿ ಬಂದಿತ್ತು. ಅವರ ಬ್ಯಾನರ್ ಪೋಸ್ಟರ್ ಗಳನ್ನು ಕಾರ್ಯಕರ್ತರು ಕ್ಷೇತ್ರದಲ್ಲಿ ಹಾಕಿದ್ದರು. ಅಮೇಥಿಯಿಂದ ನನ್ನ ಸ್ಪರ್ಧೆಯನ್ನು ಜನರು ಬಯಸಿದ್ದಾರೆ ಎಂದು ಖುದ್ದು ರಾಬರ್ಟ್ ವಾದ್ರಾ ಹೇಳಿಕೆ ನೀಡಿದ್ದರು. 1960 ರಿಂದ ರಾಯ್ ಬರೇಲಿ ಕ್ಷೇತ್ರ (Raebareli Constituency) ಕಾಂಗ್ರೆಸ್ ಭದ್ರಕೋಟೆಯಾಗಿದೆ. ಫಿರೋಜ್ ಗಾಂಧಿ, ಇಂದಿರಾ ಗಾಂಧಿ ಕೂಡಾ ಇಲ್ಲಿಂದ ಸ್ಪರ್ಧಿಸಿದ್ದರು. 2006 ರಿಂದ ಸೋನಿಯಾ ಗಾಂಧಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಸೋನಿಯಾ ಗಾಂಧಿ ರಾಜ್ಯಸಭೆ ಆಯ್ಕೆ ಬಳಿಕ ಪ್ರಿಯಾಂಕಾ ಗಾಂಧಿ ಪ್ರಬಲ ಸ್ಪರ್ಧಿಯಾಗಿದ್ದಾರೆ. ಆದರೆ ಅಮೇಥಿಯಲ್ಲಿ ಕಳೆದ ಬಾರಿ ರಾಹುಲ್ ಗಾಂಧಿ ಸೋಲನ್ನಪ್ಪಿದ್ದು ಈ ಬಾರಿಯೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಪ್ರಬಲ ಸ್ಪರ್ಧೆ ನೀಡುತ್ತಿರುವ ಹಿನ್ನೆಲೆ ರಾಹುಲ್ ಗಾಂಧಿಗೆ ಕಷ್ಟಕರವಾಗಿದೆ.
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…
ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…
ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…
ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…