ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿಲ್ಲಿ ಕಾಂತಾರ ಸಿನಿಮಾ ವೀಕ್ಷಿಸಿದ್ದಾರೆ. ಸಿನಿಮಾ ನೋಡಿದ ಬಳಿಕ ಅದ್ಭುತ ಚಿತ್ರ ನಿರ್ಮಿಸಿದ ನಟ ನಿರ್ದೇಶಕ ರಿಷಬ್ ಶೆಟ್ಟಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಾಂತಾರ ಸಿನಿಮಾ ತುಳುವನಾಡು ಹಾಗೂ ಕರಾವಳಿಯ ಶ್ರೀಮಂತ ಸಂಸ್ಕೃತಿಯನ್ನು ಪ್ರತಿಬಂಬಿಸುತ್ತಿದೆ. ರಿಷಭ್ ಶೆಟ್ಟಿ ಈ ಅದ್ಭುತ ಚಿತ್ರವನ್ನು ತೆರೆ ಮೇಲೆ ತಂದಿದ್ದಾರೆ ಎಂದು ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ. ನಿರ್ಮಾಲಾ ಸೀತಾರಾಮನ್, ತಮ್ಮ ಆಪ್ತರು, ಸ್ವಯಂ ಸೇವಕರು ಸೇರಿದಂತೆ ಕೆಲ ಮಾರ್ಗದರ್ಶಕರೊಂದಿಗೆ ಸಿನಿಮಾ ವೀಕ್ಷಿಸಿದ್ದಾರೆ.
ನಿರ್ಮಲಾ ಸೀತಾರಾಮನ್ ಟ್ವೀಟ್ ಬೆನ್ನಲ್ಲೇ ರಿಷಬ್ ಶೆಟ್ಟಿ ಹಣಕಾಸು ಸಚಿವರಿಗೆ ಧನ್ಯವಾದ ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel